ಉತ್ತರಪ್ರದೇಶದಲ್ಲಿ ಈಗಾಗಲೇ 5 ಸಿಆರ್'ಪಿಎಫ್ ಕೇಂದ್ರಗಳಿವೆ. ಲಖನೌ, ಅಲಹಾಬಾದ್, ರಾಂಪುರ, ಅಮೇಥಿ ಹಾಗೂ ನೊಯ್ಡಾದಲ್ಲಿ ಸಿಆರ್'ಪಿಎಫ್ ಕೇಂದ್ರಗಳಿವೆ. ಇದೀಗ ಮತ್ತೊಂದು ಕೇಂದ್ರವನ್ನು ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಕೇಂದ್ರದ ಈ ನಿರ್ಧಾರದಲ್ಲಿ ಯಾವುದೇ ರೀತಿಯ ಅರ್ಥವಿಲ್ಲ. ಕೇಂದ್ರ ಈ ನಿರ್ಧಾರಕ್ಕೆ ಯಾವುದೇ ಸ್ಪಷ್ಟನೆಗಳೂ ಇಲ್ಲ ಎಂದು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಹೇಳಿದ್ದಾರೆ.
ಈ ನಡುವೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದು, ತರಳು ಗ್ರಾಮದಿಂದ ಸಿಆರ್'ಪಿಎಫ್ ಪ್ರಧಾನ ಕಚೇರಿಯನ್ನು ಸ್ಥಳಾಂತರ ಮಾಡುವ ನಿರ್ಧಾರವನ್ನು ಕೂಡಲೇ ರದ್ದು ಮಾಡುವಂತೆ ಆಗ್ರಹಿಸಿದೆ.