ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆ ಜೊತೆ ರಾಜ್ಯದ ಆರೋಗ್ಯ ಕರ್ನಾಟಕ ಯೋಜನೆ ವಿಲೀನ?

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಯನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಯನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ. 
ರಾಜ್ಯ 1.43 ಕೋಟಿ ಕುಟುಂಬಗಳಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಸಲುವಾಗಿ ಚುನಾವಣೆಗೂ ಮುನ್ನ ಮಾ.2 ರಂದು ಸಿದ್ದರಾಮಯ್ಯ ಅವರು ಆರೋಗ್ಯ ಕರ್ನಾಟಕ ಯೋಜನೆಯನ್ನು ಘೋಷಣೆ ಮಾಡಿದ್ದರು. 
ಈಗಾಗಲೇ ಕೇಂದ್ರಸದಲ್ಲಿ ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆಗಳನ್ನು ಜಾರಿ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಗೊಂದಲಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈ ನಡುವೆಯೇ ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆ ಕೂಡ ಮತ್ತಷ್ಟು ಗೊಂದಲಗಳನ್ನು ಸೃಷ್ಟಿಯಾಗುವಂತೆ ಮಾಡಿದೆ. 
ಜನತೆಗೆ ಸಹಾಯಕವಾಗುವ ಯೋಜನೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯೋಜನೆಗಳೆಂದು ಪ್ರತ್ಯೇಕ ಮಾಡಬಾರದೆಂಬ ಉದ್ದೇಶದಿಂದ ಹಾಗೂ ಸಮಸ್ಯೆ, ಗೊಂದಲಗಳನ್ನು ದೂರಾಗಿಸಲು ಮುಂದಾಗಿರುವ ರಾಜ್ಯ ಸರ್ಕಾರ ಕೇಂದ್ರದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ಯೋಜನೆಯನ್ನು ವಿಲೀನಗೊಳಿಸಿ ಜನರಪರವಾಗಿ ಕಾರ್ಯನಿರ್ವಹಿಸಲು ತೀರ್ಮಾನ ಕೈಗೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ,
ಕೇಂದ್ರ ಆಯುಷ್ಮಾನ್ ಭಾರತ್ ಯೋಜನೆಯಿಂದ ಪಶ್ಚಿಮಬಂಗಾಳ ಹೊರಗೆ ಬಂದಿದ್ದು, ಕೆಲ ರಾಜ್ಯಗಳು ಅಂದರೆ, ಬಿಜೆಪಿ ಆಡಳಿತದಲ್ಲಿರುವ ಹಿಮಾಚಲ ಪ್ರದೇಶ, ಉತ್ತರಾಖಂಡ್, ಚಂಡೀಗಢ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳು ಕೇಂದ್ರದ ಯೋಜನೆಯೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿವೆ. ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಪಂಜಾಬ್ ನಲ್ಲಿ ಕೇಂದ್ರದ ಯೋಜನೆಗ ವಿರೋಧವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com