ಕಲಬುರಗಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ವಶಕ್ಕೆ ಪಡೆದ ಪೊಲೀಸರು

ಕನ್ನಡ ರಾಜ್ಯೋತ್ಸ,ವ ದಿನದಂದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕಲಬುರಗಿ: ಕನ್ನಡ ರಾಜ್ಯೋತ್ಸ,ವ ದಿನದಂದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಕಲ್ಯಾಣ ಕರ್ನಾಟಕ ಸಮಿತಿಯ ಕಾರ್ಯಕರ್ತರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ನಗರದ ಸರ್ದಾರ್ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿದ ಸುಮಾರು 10 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ಕೆಲವು ಶ್ರೀಗಳು ಸಹ ಭಾಗಿಯಾಗಿದ್ದರು ಎನ್ನಲಾಗಿದೆ.
ಕನ್ನಡ ರಾಜ್ಯೋತ್ಸವ ದಿನದಂದು ನಾವು ನವ ಕರ್ನಾಟಕ ಧ್ವಜ ಹಾರಿಸುವುದಾಗಿ ನಿನ್ನೆ ಕಲ್ಯಾಣ ಕರ್ನಾಟಕ ಸಮಿತಿ ಸದಸ್ಯ ವಿನೋದ್ ಕುಮಾರ್ ಅವರು ಎಎನ್ಐ ಗೆ ತಿಳಿಸಿದ್ದರು.
ಹಿಂದೂಳಿದ ಹೈದರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ರಚನೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇನೆ ಎಂದು ವಿನೋದ್ ಕುಮಾರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com