ರಾಜ್ಯ

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ವಿದ್ಯಾರ್ಥಿ, ಟೆಕ್ಕಿ ಸಾವು

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ವಿದ್ಯಾರ್ಥಿ, ಟೆಕ್ಕಿ ಸಾವು
ಸಂಗ್ರಹ ಚಿತ್ರ
Published On :
ಬೆಂಗಳೂರು: ನಗರದಲ್ಲಿ ಗುರುವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಹಾಗೂ ಟೆಕ್ಕಿ ಸಾವನ್ನಪ್ಪಿದ್ದಾರೆ. 
ಬಿಡದಿ ತಟ್ಟೆ ಇಡ್ಲಿ ಸವಿಯಲು ತನ್ನ ಸ್ನೇಹಿತರ ಜೊತೆಗೆ ತೆರಳುತ್ತಿದ್ದಾಗ ಕೆಂಗೇರಿ ಸಮೀಪ ನೈಸ್ ರಸ್ತೆ ಮೇಲ್ಸೇತುವೆಯಲ್ಲಿ ಕೆಎಸ್ಆರ್'ಟಿಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.
ಅತ್ತಿಬೆಲೆ ಕಾಲೇಜಿನ ವಿದ್ಯಾರ್ಥಿ ಪೂರ್ಣಚಂದ್ರ (18) ಮೃತ ವಿದ್ಯಾರ್ಥಿ. ತನ್ನ ನಾಲ್ವರು ಸ್ನೇಹಿತರೊಂದಿಗೆ ನಿನ್ನೆ ಬೆಳಿಗ್ಗೆ 7.30ರ ಸುಮಾರಿಗೆ ಅವಘಟ ಸಂಭವಿಸಿದೆ. ತನ್ನ ತಾಯಿಗೆ ಕರೆ ಮಾಡಿ ಬಿಡದಿ ಹೋಟೆಲ್ ವೊಂದರಲ್ಲಿ ತಟ್ಟೆ ಇಡ್ಲಿ ಚೆನ್ನಾಗಿ ಮಾಡುತ್ತಾರೆ. ಅಲ್ಲಿಗೆ ಇಡ್ಲಿ ತಿನ್ನಲು ಗೆಳೆಯರ ಜೊತೆ ಹೋಗುತ್ತಿರುವುದಾಗಿ ಹೇಳಿ ಹೊರಟಿಸಿದ್ದಾನೆ. ಘಟನೆ ಸಂಬಂಧ ಬಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಕೆ.ಆರ್.ಪುರದ ಕಲ್ಕೆರೆ ಸಮೀಪ ಸಂಭವಿಸಿದ ಅಪಘಾತದಲ್ಲಿ ಸಾಫ್ಟ್'ವೇರ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ. 
ರಾಮಮೂರ್ತಿ ನಗರದ ಪಿಜಿ ನಿವಾಸಿ ಸೂರ್ಯತೇಜ (27) ಮೃತ ವ್ಯಕ್ತಿಯಾಗಿದ್ದಾರೆ. ತನ್ನ ಗೆಳೆಯನ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪಾರ್ಟಿ ಮುಗಿಸಿಕೊಂಡು ಅವರು ಪಿಜಿಗೆ ಮರಳುವಾಗ ಅವಘಡ ಸಂಭವಿಸಿದೆ. ಆಂಧ್ರಪ್ರದೇಶದ ಮೂಲದರವಾಗಿದ್ದ ಸೂರ್ಯತೇಜ, ರಾಮಮೂರ್ತಿನಗರದಲ್ಲಿ ವಾಸವಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.