ಶನಿವಾರ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ನ.6 ರಂದು ಮತ ಎಣಿಕೆ ನಡೆಯಲಿದೆ. ಐದೂ ಕ್ಷೇತ್ರಗಳಲ್ಲಿ ಒಟ್ಟು 54,54,275 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಬಳ್ಳಾರಿ, ಶಿವಮೊಗ್ಗ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರದಾನ ಆರಂಭವಾಗಿದ್ದು, ಜಮಖಂಡಿ ಮತ್ತು ರಾಮನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಮತದಾನ ನಡೆಯುತ್ತಿದೆ, ಬಳ್ಳಾರಿ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 17, 13, 653 ಮತದಾರರಿದ್ದು, 1901 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಂತೆಯೇ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ 16, 45, 519 ಮತದಾರರಿದ್ದು, ಇಲ್ಲಿ ಒಟ್ಟು 2,002 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ 16, 85, 037 ಮತದಾರರಿದ್ದು, ಇಲ್ಲಿ 2, 047 ಮತಗಟ್ಟೆಗಳನ್ನು ಸ್ಥಾಪಿಸಿ ಮತದಾನಕ್ಕೆ ಅನುವು ಮಾಡಿಕೊಡಲಾಗಿದೆ.