ಮತದಾನಕ್ಕಾಗಿ ಸಾಲುಗಟ್ಟಿ ನಿಂತಿರುವ ಮತದಾರರು
ಮತದಾನಕ್ಕಾಗಿ ಸಾಲುಗಟ್ಟಿ ನಿಂತಿರುವ ಮತದಾರರು

ಕರ್ನಾಟಕ ಉಪಚುನಾವಣೆ: 2 ವಿಧಾನಸಭಾ ಕ್ಷೇತ್ರಗಳಲ್ಲಿ 11 ಗಂಟೆ ವೇಳೆಗೆ ಶೇ.21.5 ರಷ್ಟು ಮತದಾನ

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯವರೆಗೂ ಶೇ.21.5ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯವರೆಗೂ ಶೇ.21.5ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳು ಹಾಗೂ  ಬಳ್ಳಾರಿ, ಮಂಡ್ಯ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಈ ಪೈಕಿ ಜಮಖಂಡಿಯಲ್ಲಿ ಬೆಳಗ್ಗೆ 11 ಗಂಟೆಯವರೆಗೂ ಶೇ.22.3ರಷ್ಟು ಮತ್ತು ರಾಮನಗರದಲ್ಲಿ ಶೇ.21.5ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಇನ್ನು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 11 ಗಂಟೆಯವರೆಗೂ ಶೇ.17.37ರಷ್ಟು ಮತದಾನವಾಗಿದ್ದು, ಬಳ್ಳಾರಿಯಲ್ಲಿ 24.58ರಷ್ಟು ಮತದಾನವಾಗಿದೆ. ಅಂತೆಯೇ ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಶೇ.13.36ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com