ಬೆಂಗಳೂರು: ಮಾಜಿ ನೀಲಿ ತಾರೆ ಹಾಗೂ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡ್ಯಾನ್ಸ್ ಮತ್ತು ಸಂಗೀತ ಕಾರ್ಯಕ್ರಮ ನಡೆಸಿಕೊಡಲು ಶನಿವಾರ ನಗರಕ್ಕೆ ಆಗಮಿಸಿದ್ದಾರೆ.
ಸನ್ನಿ ಲಿಯೋನ್ ಈಗಾಗಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ರಾತ್ರಿ 9 ಗಂಟೆಯ ನಂತರ ಕಾರ್ಯಕ್ರಮ ನಡೆಯಲಿರುವ ನಗರದ ಮಾನ್ಯತಾ ಟೆಕ್‌ಪಾರ್ಕ್ ಗೆ ಆಗಮಿಸಲಿದ್ದಾರೆ.
ಬೆಂಗಳೂರಿಗೆ ಬರುತ್ತಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಹಾಟ್ ಫೋಟೋ ಟ್ವೀಟ್ ಮಾಡಿರುವ ಸನ್ನಿ, ಚಿಲ್ ಬೆಂಗಳೂರ್ ಎಂದು ಬರೆದುಕೊಂಡಿದ್ದಾರೆ.
ಇನ್ನು ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸನ್ನಿ ಕಾರ್ಯಕ್ರಮದ ಭದ್ರತೆಗೆ ಸುಮಾರು 200 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟೈಮ್ಸ್ ಕ್ರಿಯೆಷನ್ಸ್ ಆಯೋಜಿಸಿರುವ ಈ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ ಆರಂಭವಾಗಿದ್ದು, ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಗಾಯನ ಪ್ರಸ್ತುತಪಡಿಸಲಿದ್ದಾರೆ. ಸನ್ನಿ ಲಿಯೋನ್ ತಮ್ಮ ಡ್ಯಾನ್ಸ್ ಮೂಲಕ ಜನರನ್ನು ರಂಜಿಸಲಿದ್ದಾರೆ.