ಬೆಂಗಳೂರು: ಜನರೆದುರೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ!

ಬೆಂಗಳೂರಿನ ವಿಜಯನಗರದ ವಾಟರ್ ಟ್ಯಾಂಕ್ ಬಳಿ ಸಾರ್ವಜನಿಕರೆದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಬೆಂಗಳೂರಿನ ವಿಜಯನಗರದ ವಾಟರ್ ಟ್ಯಾಂಕ್ ಬಳಿ ಸಾರ್ವಜನಿಕರೆದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 
ಮೃತ ಯುವಕನನ್ನು 27 ವರ್ಷದ ಮಹದೇವ್ ಎಂದು ಗುರುತಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು ಯುವಕನನ್ನು ಜನರೆದುರೇ ಹತ್ಯೆ ಮಾಡಿದ್ದಾರೆ. ವಿಜಯನಗರದ ಫುಡ್ ಸ್ಟ್ರೀರ್ಟ್ ಬಳಿ ಜಗಳವಾಗಿ, ಯುವಕನನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ. 
ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಆಸ್ಪತ್ರೆಗೆ ಮಹಾದೇವ ಮೃತದೇಹ ರವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com