ಟಿಪ್ಪು ಜಯಂತಿಗೆ ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಪರಮೇಶ್ವರ್

ಈ ವರ್ಷವೂ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಬದ್ಧವಾಗಿದ್ದು. ಟಿಪ್ಪು ಜಯಂತಿ ವೇಳೆ ...
ಡಾ ಜಿ ಪರಮೇಶ್ವರ್
ಡಾ ಜಿ ಪರಮೇಶ್ವರ್
Updated on: 

ಬೆಂಗಳೂರು: ಈ ವರ್ಷವೂ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಬದ್ಧವಾಗಿದ್ದು. ಟಿಪ್ಪು ಜಯಂತಿ ವೇಳೆ ಹಿಂಸಾಚಾರ, ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಯಾರೇ ಪ್ರಯತ್ನಿಸಿದರೂ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  2019ರ ಲೋಕಸಭಾ ಚುನಾವಣೆ ಲಾಭಕ್ಕಾಗಿ ಬಿಜೆಪಿಯವರು ಅನಗತ್ಯವಾಗಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ಅವರು ಎಷ್ಟೇ ವಿರೋಧಿಸಿದರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸಿಯೇ ಆಚರಿಸುತ್ತದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿದೆ ಎಂದರು.

ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಂತೆ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಪತ್ರದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿಷ್ಟಾಚಾರದ ಪ್ರಕಾರ ಅವರ ಹೆಸರು ಹಾಕಲಾಗಿದೆ. ಬರುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com