ನವೆಂಬರ್ 15ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಸಚಿವೆ ಜಯಮಾಲಾ

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆಗೆ ನಡಿದಿದ್ದ ಉಪ ಚುನಾವಣೆ ನಿಮಿತ್ತ ಜಾರಿಯಲ್ಲಿದ್ದ ನೀತಿ ಸಂಹಿತೆಯ ಕಾರಣ ಮುಂದೂಡಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ....
ಜಯಮಾಲಾ
ಜಯಮಾಲಾ
ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆಗೆ ನಡಿದಿದ್ದ ಉಪ ಚುನಾವಣೆ ನಿಮಿತ್ತ ಜಾರಿಯಲ್ಲಿದ್ದ ನೀತಿ ಸಂಹಿತೆಯ ಕಾರಣ ಮುಂದೂಡಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ  ಪ್ರದಾನ ಕಾರ್ಯಕ್ರಮವು ಇದೇ ನವೆಂಬರ್ 15ಕ್ಕೆ ನಡೆಯಲಿದೆ ಎಂದು ಕನ್ನಡ ಸಂಸ್ಕೃತಿ ಸಚಿವೆ ಜಯಮಾಲಾ ಹೇಳಿದ್ದಾರೆ.
ಸಾಹಿತ್ಯ, ಸಿನಿಮಾ, ಕ್ರೀಡೆ, ಸಮಾಜಸೇವೆ ಸೇರಿ ಣಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 63 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಸಲ್ಲಲಿದೆ.
ಈ ಬಾರಿ ಪ್ರಶಸ್ತಿ ಜತೆಗೆ ನಗದು, ಫ್ಲಕ, ಶಾಲು ಹಾಗೂ ಕನ್ನಡ ತಾಯಿ ಭುವನೇಶ್ವರಿಯ ಪ್ರತಿಮೆಗಳನ್ನು ಪ್ರಶಸ್ತಿ ಪುರಸ್ಕೃತರಿಗೆ ನೀಡಲಾಗುತ್ತದೆ.ಬೆಂಗಳೂರಿನ ರವೀಂದರ್ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನಸಮಾರಂಭ ಆಯೋಜನೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಪಟ್ಟಿ ತಯಾರಿಸಿದ್ದು ಮುಖ್ಯಮಂತ್ರಿಗಳು ಇದಾಗಲೇ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ ಎಂದು ಜಯಮಾಲಾ ವಿವರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com