ಬೆಂಗಳೂರು: ಬಿಜೆಪಿಯ ವಿರೋಧದ ನಡುವೆಯೂ ಮೈತ್ರಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಆದರೆ, ಆಡಳಿತ ಯಂತ್ರದ ಪ್ರಮುಖರೇ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.
ವಿಶ್ರಾಂತಿ ಪಡೆಯಲು ತೆರಳುತ್ತಿರುವುದಾಗಿ ಹೇಳಿ ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿಯಿಂದ ದೂರ ಉಳಿದಿರುವ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಕೂಡ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.
ಆದರೆ ಅಚ್ಚರಿಯ ಬೆಳವಣಿಗೆ ಎಂಬಂತೆ ಇಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಕೂಡ ಕಾರ್ಯಕ್ರಮದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರವೇ ಆಚರಣೆಗೆ ತಂದ ಈ ಕಾರ್ಯಕ್ರಮದಿಂದ ಪರಮೇಶ್ವರ್ ಅವರೇ ದೂರ ಉಳಿಯ ಕಾರಣ ಏನಿರಬಹುದು ಎಂಬುದು ಆಶ್ಚರ್ಯ ಮೂಡಿಸಿದೆ.
ಮಾಜಿ ಸಚಿವ ಚೆನ್ನಿಗಪ್ಪ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಅವರ ಆರೋಗ್ಯ ವಿಚಾರಿಸಲು ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಸ್ಪಷ್ಟ ಪಡಿಸಿದ್ದಾರೆ.