ಇನ್ನು ವಿಚಾರಣೆಗೆ ಹಾಜರಾದರೆ, ಅವರನ್ನು ಬಂಧಿಸುವುದು ಅಥವಾ ವಿಚಾರಣೆ ನಡೆಸಿ ಕಳುಹಿಸುವುದು ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು. ಆದರೆ, ಪ್ರಸ್ತುತದ ಪರಿಸ್ಥಿತಿಯಲ್ಲಿ ಸಿಸಿಬಿ ಅಧಿಕಾರಿಗಳು ಜನಾರ್ಧನ ರೆಡ್ಡಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.