ಆ್ಯಂಬಿಡೆಂಟ್ ಕಂಪನಿ ವಂಚನೆ ಪ್ರಕರಣ: ಸಿಸಿಬಿಯಿಂದ ಜನಾರ್ಧನ ರೆಡ್ಡಿ ವಿಚಾರಣೆ

ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರು ತಮ್ಮ ಪರ ವಕೀಲ ಚಂದ್ರಶೇಖರ್ ಅವರೊಂದಿಗೆ ನಗರದ ಸಿಸಿಬಿ ಕಚೇರಿಗೆ...
ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣ: ಸಿಸಿಬಿ ಕಚೇರಿಗೆ ಆಗಮಿಸಿದ ಗಾಲಿ ಜನಾರ್ಧನ ರೆಡ್ಡಿ
ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣ: ಸಿಸಿಬಿ ಕಚೇರಿಗೆ ಆಗಮಿಸಿದ ಗಾಲಿ ಜನಾರ್ಧನ ರೆಡ್ಡಿ
Updated on: 
ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರು ತಮ್ಮ ಪರ ವಕೀಲ ಚಂದ್ರಶೇಖರ್ ಅವರೊಂದಿಗೆ ನಗರದ ಸಿಸಿಬಿ ಕಚೇರಿಗೆ ಶನಿವಾರ ಹಾಜರಾಗಿದ್ದಾರೆ. 
ವಕೀಲ ಹನುಮಂತರಾಯ ಅವರ ಕಚೇರಿಯಿಂದ ಹೊರಟ ರೆಡ್ಡಿಯವರು, ವಕೀಲರ ಕಾರಿನಿಂದಲೇ ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ರೆಡ್ಡಿಯವರೊಂದಿಗೆ ಅವರ ಆಪ್ತ ಅಲಿಖಾನ್ ಕೂಡ ಆಗಮಿಸಿದ್ದಾರೆ. 
ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರು ಶುಕ್ರವಾರ ರೆಡ್ಡಿಯವರಿಗೆ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ನಲ್ಲಿ 48 ಗಂಟೆಗಳೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. 
ಇದರಂತೆ ವಕೀಲರೊಂದಿಗೆ ಸುದೀರ್ಘ ಮಾತುಕತೆ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ಈ ಹಿಂದೆ ಜನಾರ್ಧನ ರೆಡ್ಡಿ ಅಜ್ಞಾತ ಸ್ಥಳದಿಂದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಇದರಂತೆ ಇದೀಗ ಸಿಸಿಬಿ ಕಚೇರಿಗೆ ಆಗಮಿಸಿರುವ ರೆಡ್ಡಿಯವರನ್ನು ಸಿಸಿಬಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com