ಸುರಕ್ಷಿತ ವಾಹನ ಚಾಲನೆ; ಪಿಯುಸಿ ವಿದ್ಯಾರ್ಥಿಗಳಿಗೆ ಬೋಧನೆ

ಸುರಕ್ಷಿತ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಪದವಿಪೂರ್ವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸುರಕ್ಷಿತ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸರ್ಕಾರ ಸದ್ಯದಲ್ಲಿಯೇ ತರಗತಿಗಳು ಆರಂಭಿಸಲಿದೆ.

ಬ್ರಿಟನ್ ಮೂಲದ ಬಹು ರಾಷ್ಟ್ರೀಯ ಕಂಪೆನಿ ಡಿಯಾಜಿಯೊ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಡಿ ಈ ಉಪಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಂಪೆನಿ ಸಲ್ಲಿಸಿರುವ ಪ್ರಸ್ತಾವನೆಯನ್ನು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ನಿರತವಾಗಿದೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಕಳೆದ ಸೆಪ್ಟೆಂಬರ್ ನಲ್ಲಿ ಡಿಯಾಜಿಯೊ ಕಂಪೆನಿ ಪ್ರಸ್ತಾವನೆ ಸಲ್ಲಿಸಿದೆ. ಪ್ರಸ್ತಾವನೆಯಲ್ಲಿ ಸಲ್ಲಿಸಿರುವಂತೆ, ದ್ವಿತೀಯ ಪಿಯುಸಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸುರಕ್ಷಿತವಾಗಿ ವಾಹನ ಚಲಾಯಿಸುವ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಬೋಧಿಸಲಾಗುತ್ತದೆ.

18 ವರ್ಷ ತುಂಬಿದ ಪ್ರತಿಯೊಬ್ಬ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಚಾಲನಾ ಪರವಾನಗಿ ಕಾರ್ಡು ಸಿಗಬೇಕೆಂದರೆ ಇದು ಕಡ್ಡಾಯವಾಗಿರುತ್ತದೆ, ಸುರಕ್ಷಿತವಾಗಿ ವಾಹನ ಚಾಲನೆ ಮಾಡುವುದು ವಿದ್ಯಾರ್ಥಿಗಳಿಗೆ ಆದ್ಯತೆ ವಿಷಯವಾಗಿರುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಇದು ಕೇವಲ ಕೆಲವು ಗಂಟೆಗಳ ತರಗತಿಯೇ ಅಥವಾ ಪ್ರಮಾಣಪತ್ರ ನೀಡಲು ನಿಗದಿತ ಅವಧಿಯವರೆಗೆ ನಡೆಸುವ ಕೋರ್ಸ್ ಆಗಿರಬೇಕೆ ಎಂಬ ಬಗ್ಗೆ ಇಲಾಖೆ ಇನ್ನೂ ನಿರ್ಧಾರ ಮಾಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com