ಟಿಪ್ಪು ಜಯಂತಿ: ಸಂವಹನ ಕೊರತೆಯಿಂದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಮಾರಂಭಕ್ಕೆ ಗೈರು

ಸಂವಹನ ಕೊರತೆಯಿಂದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಟಿಪ್ಪು ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
Updated on

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಟಿಪ್ಪು ಜಯಂತಿ ಉದ್ಘಾಟಿಸಬೇಕಾಗಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಿಂಗಾಪುರ ಪ್ರವಾಸದಲ್ಲಿದ್ದರಿಂದ ಸಮಾರಂಭಕ್ಕೆ ಗೈರಾಗಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರು ಹೇಳಿಕೆ ನೀಡಿದ್ದರು.

ಆದರೆ, ಸಮಾರಂಭದ ವೇಳಾಪಟ್ಟಿ ಬಗ್ಗೆ ಸಂವಹನ ಕೊರತೆಯಿಂದಾಗಿ ಪರಮೇಶ್ವರ್ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

 ಸಂಜೆ 6-30ಕ್ಕೆ ಸಮಾರಂಭವನ್ನು  ನಿಗದಿಪಡಿಸಲಾಗಿದೆ ಎಂದು ಪರಮೇಶ್ವರ್  ಅಂದುಕೊಂಡಿದ್ದರಿಂದ  ಮಧ್ಯಾಹ್ನ 3 ರಿಂದ 4 ಗಂಟೆ ಮಧ್ಯೆ ಬೆಂಗಳೂರಿಗೆ ಬಂದಿಳಿಯಲು ವ್ಯವಸ್ಥೆ ಮಾಡಿಕೊಂಡಿದ್ದರು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರೊಂದಿಗೆ ಪರಮೇಶ್ವರ್ ಸಿಂಗಾಪುರ ಪ್ರವಾಸ ಕೈಗೊಂಡಿದ್ದರು. ಆದಾಗ್ಯೂ, ಚನ್ನಿಗಪ್ಪ ಕೂಡಾ ಸಮಾರಂಭದ ವೇಳಾಪಟ್ಟಿಯನ್ನು  ಪರಮೇಶ್ವರ್ ಅವರಿಗೆ ಮನವರಿಕೆ ಮಾಡಿಕೊಟ್ಟಿಲ್ಲ. ಅದಕಾರಣ ಪರಮೇಶ್ವರ್  ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ.

 ಪರಮೇಶ್ವರ್ ಅನುಪಸ್ಥಿತಿಯಲ್ಲಿ ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್  ಕಾರ್ಯಕ್ರಮ ಉದ್ಘಾಟಿಸಿದರು. ಜೆಡಿಎಸ್ ಪಕ್ಷದ ಯಾವೊಬ್ಬ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ.

ವಿಧಾನಪರಿಷತ್ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತಾದರೂ ಅವರು  ಸಹ ಟಿಪ್ಪು ಜಯಂತಿಯಿಂದ ದೂರವೇ ಉಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com