ನ. 24ರವರೆಗೂ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ನ್ಯಾಯಾಂಗ ಬಂಧನ

ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರನ್ನ ನವೆಂಬರ್ 24ರವರೆವಿಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
Updated on: 

ಬೆಂಗಳೂರು:  ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರನ್ನ ನವೆಂಬರ್ 24ರವರೆವಿಗೂ  ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಲಾಗಿದೆ.

ಈ ಪ್ರಕರಣ ಸಂಬಂಧ ನಿನ್ನೆ ತಡರಾತ್ರಿವರೆವಿಗೂ ಸವಿಸ್ತಾರವಾಗಿ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಇಂದು ಮಧ್ಯಾಹ್ನ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಜನಾರ್ಧನ  ರೆಡ್ಡಿಯನ್ನು ಹಾಜರುಪಡಿಸಿದರು.

1ನೇ ಎಸಿಎಂಎಂಎಂ ನ್ಯಾಯಾಧೀಶ ಜಗದೀಶ್ , ನವೆಂಬರ್ 24ರವರೆವಿಗೂ 14 ದಿನಗಳ ಕಾಲ ಜನಾರ್ಧನ ರೆಡ್ಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತೀರ್ಪಿ ಪ್ರಕಟಿಸಿದರು. ನಂತರ  ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.
ಇದರಿಂದಾಗಿ ಮೂರನೇ ಬಾರಿಗೆ ಮಾಜಿ ಸಚಿವ, ಗಣಿ ಉದ್ಯಮಿ ಜನಾರ್ಧನ ರೆಡ್ಡಿ ಪರಪ್ಪನ ಅಗ್ರಹಾರದ ಜೈಲು ಸೇರುವಂತಾಗಿದೆ.ಈ ಮಧ್ಯೆ ನಾಳೆ ಜನಾರ್ದನ ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com