ರಾಜ್ಯಪಾಲ ವಜೂಭಾಯಿ ವಾಲಾ, ಬಿ.ಎಸ್. ಯಡಿಯೂರಪ್ಪ ಮತ್ತಿತರರಿಂದ ಅನಂತ್ ಕುಮಾರ್ ಅಂತಿಮ ದರ್ಶನ

ರಾಜ್ಯಪಾಲ ವಾಜೂಭಾಯಿ ವಾಲಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಮುಖಂಡ ಆರ್. ಅಶೋಕ್ ಸೇರಿದಂತೆ ಪಕ್ಷದ ಅನೇಕ ನಾಯಕರು ಅನಂತ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು..
ರಾಜ್ಯಪಾಲ ವಜೂಭಾಯಿ ವಾಲಾ ಅವರಿಂದ ಅಂತಿಮ ದರ್ಶನ
ರಾಜ್ಯಪಾಲ ವಜೂಭಾಯಿ ವಾಲಾ ಅವರಿಂದ ಅಂತಿಮ ದರ್ಶನ
Updated on: 

ಬೆಂಗಳೂರು: ಕ್ಯಾನ್ಸರ್ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಿದ್ದು, ವಿವಿಧ ಪಕ್ಷಗಳ ಗಣ್ಯರು ಅಗಲಿದ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ರಾಜ್ಯಪಾಲ ವಾಜೂಭಾಯಿ ವಾಲಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಮುಖಂಡರಾದ  ಆರ್. ಅಶೋಕ್ , ಸುರೇಶ್ ಕುಮಾರ್,  ವಿ. ಸೋಮಣ್ಣ, ಕುಮಾರ್ ಬಂಗಾರಪ್ಪ  ಸೇರಿದಂತೆ ಪಕ್ಷದ ಅನೇಕ ನಾಯಕರು ಅನಂತ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು..

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಅನಂತ್ ಕುಮಾರ್ ಅಂತಿಮ ದರ್ಶನ ಪಡೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com