ಸಾಂದರ್ಭಿಕ ಚಿತ್ರ
ರಾಜ್ಯ
'ಗಜ' ಚಂಡಮಾರುತ: ಬೆಂಗಳೂರಿನಲ್ಲಿ ಎರಡು ದಿನ ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಜ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡು ಗುರುವಾರ ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದ್ದು, ಇದರ ಪರಿಣಾಮ ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ
ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ನವೆಂಬರ್ 15 ಮತ್ತು 16ರಂದು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲೂ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಕೋಪ, ವಿಪತ್ತು ನಿರ್ವಹಣಾ ಮಂಡಳಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ