ರಾಮಮಂದಿರ ವಿವಾದ: ನ.25ಕ್ಕೆ ಬೆಂಗಳೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ವಿಹೆಚ್'ಪಿ ರ್ಯಾಲಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರ ಅಭಿಪ್ರಾಯಗಳನ್ನು ಹೆಚ್ಚಿಸುವ ಸಲುವಾಗಿ ರಾಷ್ಟ್ರಾದಾದ್ಯಂತ ರ್ಯಾಲಿ ನಡೆಸಲು ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ನ.25 ರಂದು ಬೆಂಗಳೂರು, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರ ಅಭಿಪ್ರಾಯಗಳನ್ನು ಹೆಚ್ಚಿಸುವ ಸಲುವಾಗಿ ರಾಷ್ಟ್ರಾದಾದ್ಯಂತ ರ್ಯಾಲಿ ನಡೆಸಲು ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ನ.25 ರಂದು ಬೆಂಗಳೂರು, ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಬೃಹತ್ ರ್ಯಾಲಿ ನಡೆಸಲು ನಿರ್ಧರಿಸಿದೆ. 
ಕೆಲ ದಿನಗಳ ಹಿಂದೆ ರಾಜಧಾನಿ ದೆಹಲಿಯಲ್ಲಿ ಹಿಂದೂ ಸಂತರೊಂದಿಗೆ ನಡೆಸಿದ ಸಭೆಯಲ್ಲಿ ಕೆಲ ನಿರ್ಧಾರಗಳನ್ನು ವಿಹೆಚ್'ಪಿ ತೆಗೆದುಕೊಂಡಿದ್ದು, ದೇಶದ ಒಟ್ಟು 500 ಪ್ರದೇಶಗಳಲ್ಲಿ ರ್ಯಾಲಿ ನಡೆಸಲು ನಿರ್ಧರಿಸಿದೆ ಎಂದು ತಿಳಿದಿಬಂದಿದೆ. 
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಮ ಮಾಡುವ ಕುರಿತು ಕೇಂದ್ರ ಸರ್ಕಾರದ ಮೇಲೆ ಸಾರ್ವಜನಿಕರು ಒತ್ತಡ ಹೇರುವಂತೆ ಮಾಡಲು ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಸಾವಿರಾರು ಗ್ರಾಮಗಳಲ್ಲಿ ಸಣ್ಣ ಸಣ್ಣ ಸಮಾವೇಶ ನಡೆಸಲು ನಿರ್ಧರಿಸಿದ್ದೇವೆಂದು ವಿಹೆಚ್'ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಂದೆಯವರು ಹೇಳಿದ್ದಾರೆ. 
ಸುಪ್ರೀಂಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಆದರೆ, ಆ ಗೌರವ ಶಾಶ್ವತವಾಗಿ ನ್ಯಾಯಕ್ಕಾಗಿ ಕಾಯುತ್ತೇವೆಂದಲ್ಲ. ಹಿಂದೂ ಸಮಾಜ ನ್ಯಾಯಾಲಯ ನ್ಯಾಯಕ್ಕಾಗಿ ಶಾಶ್ವತವಾಗಿ ಕಾಯುವುದಿಲ್ಲ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com