ರಾಜ್ಯ

ಮಕ್ಕಳ ದಿನಾಚರಣೆ ಪ್ರಯುಕ್ತ ಸರ್ಕಾರದಿಂದ ವಿಶೇಷ 'ಗ್ರಾಮಸಭೆ'

ಮಕ್ಕಳ ದಿನಾಚರಣೆಗೆ ಇನ್ನು ಒಂದೇ ದಿನ ಬಾಕಿ. ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚೆ ...

ಮಕ್ಕಳ ದಿನಾಚರಣೆ ಪ್ರಯುಕ್ತ ಸರ್ಕಾರದಿಂದ ವಿಶೇಷ 'ಗ್ರಾಮಸಭೆ'
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮಕ್ಕಳ ದಿನಾಚರಣೆಗೆ ಇನ್ನು ಒಂದೇ ದಿನ ಬಾಕಿ. ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಗ್ರಾಮಸಭೆಗಳನ್ನು ನಡೆಸಲು ಗ್ರಾಮ ಪಂಚಾಯತ್ ಗಳಿಗೆ ಸೂಚಿಸಲಾಗಿದೆ. ನಗರ ಪ್ರದೇಶಗಳಲ್ಲಿ ವಾರ್ಡ್ ಗಳ ಮಟ್ಟದಲ್ಲಿ ಕೂಡ ಇಂತಹದೇ ಸಭೆಗಳನ್ನು ನಡೆಸಲು ಮಕ್ಕಳ ಹಕ್ಕುಗಳ ಕಾರ್ಯಕರ್ತರು ಮುಂದಾಗಿದ್ದಾರೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಸಂಬಂಧಪಟ್ಟ ಗ್ರಾಮಪಂಚಾಯತ್ ಗಳ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು ಈ ತಿಂಗಳಲ್ಲಿ ಯಾವುದಾದರೊಂದು ದಿನ ಮಕ್ಕಳಿಗೆ ಗ್ರಾಮಸಭೆ ನಡೆಸಲು ಸೂಚಿಸಿದ್ದಾರೆ.

ಮಕ್ಕಳ ಆರೋಗ್ಯ, ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಹಕ್ಕುಗಳು, ಮಕ್ಕಳ ಕಳ್ಳಸಾಗಣೆ ಮೊದಲಾದವು ಒಳಗೊಂಡಿರುತ್ತದೆ. ಗ್ರಾಮಸಭೆಗಳಲ್ಲಿ ಸಂಬಂಧಪಟ್ಟ ಸದಸ್ಯರು ಗ್ರಾಮಸ್ಥರೊಂದಿಗೆ, ಆಸಕ್ತಿದಾರರೊಂದಿಗೆ ಚರ್ಚಿಸಿ ಅವುಗಳನ್ನು ತಮ್ಮ ಸಾಫ್ಟ್ ವೇರ್ ಗಳಲ್ಲಿ ಅಪ್ ಡೇಟ್ ಮಾಡುತ್ತಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಇಲಾಖೆ ನಿರ್ದೇಶಕ ಎಂ ಕೆ ಕೆಂಪೇಗೌಡ, ಕಳೆದ ಕೆಲ ವರ್ಷಗಳಿಂದ ನವೆಂಬರ್ ತಿಂಗಳಲ್ಲಿ ಪ್ರತಿವರ್ಷ ಎರಡು ಬಾರಿ ಮಕ್ಕಳಿಗೆ ಗ್ರಾಮಸಭೆಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ. ವಿಶೇಷ ಸಭೆಗಳನ್ನು ಮಕ್ಕಳಿಗಾಗಿ ಮಕ್ಕು ಮಹಿಳೆಯರಿಗೆ ನಡೆಸಲು ನಾವು ಅಧಿಕಾರಿಗಳಿಗೆ ಹೇಳುತ್ತೇವೆ. ಮಕ್ಕಳಿಗಾಗಿ ಸಂಬಂಧಪಟ್ಟ ವಿಷಯಗಳನ್ನು ಚರ್ಚಿಸಿ ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದರು.

ಗ್ರಾಮಸಭೆಗಳಲ್ಲಿ ಮಕ್ಕಳು ತಮ್ಮ ಶಾಲೆ ಮತ್ತು ಕಲಿಕೆಗೆ ಸಂಬಂಧಿಸಿದ ಹಲವು ವಿಷಯಗಳು ಮತ್ತು ಸಮಸ್ಯೆಗಳು, ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಬಹುದು.

2003ರಲ್ಲಿ ಗ್ರಾಮಸಭೆಗಳ ಜಾರಿಯ ರೂವಾರಿ ಮತ್ತು ಮಕ್ಕಳ ಹಕ್ಕು ಟ್ರಸ್ಟ್ ನ ನಿರ್ದೇಶಕ ಮತ್ತು ಕಾರ್ಯಕರ್ತ ವಾಸುದೇವ ಶರ್ಮ ಮಾತನಾಡಿ, ಬಳ್ಳಾರಿ ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಮೂರು ವರ್ಷಗಳಲ್ಲಿ ಅಧಿಕಾರಿಗಳು ಸಮೀಕ್ಷೆ ನಡೆಸಿದಾಗ ಬಹುತೇಕ ಪಂಚಾಯತ್ ಸದಸ್ಯರಿಗೆ ಮಕ್ಕಳ ಸಮಸ್ಯೆಗಳ ಬಗ್ಗೆ ಅರಿವು ಇರಲಿಲ್ಲ. ನಂತರ ಮಕ್ಕಳ ಸಮಸ್ಯೆಗಳನ್ನು ಪಂಚಾಯತ್ ಕಾಯ್ದೆಯಡಿ ತಂದು ಅಲ್ಲಿ ಚರ್ಚೆ ನಡೆಸಲು ನಿರ್ಣಯಿಸಿದರು. ನಂತರ 2006ರಲ್ಲಿ ಸರ್ಕಾರದ ಗಮನಕ್ಕೆ ತರಲಾಯಿತು, ಆ ಬಳಿಕ ಗ್ರಾಮಸಭೆಗಳನ್ನು ನಡೆಸಲು ಸುತ್ತೋಲೆ ಹೊರಡಿಸಲಾಯಿತು ಎಂದರು.

ಇಂದು ಕರ್ನಾಟಕ ರಾಜ್ಯ ಮಕ್ಕಳ ಸಮಸ್ಯೆಗಳನ್ನು ಗ್ರಾಮ ಮಟ್ಟದಲ್ಲಿ ಬಗೆಹರಿಸುವ ವಿಷಯಗಳಲ್ಲಿ ಮುಂಚೂಣಿಯಲ್ಲಿದ್ದು, ಈ ಮೂಲಕ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಶರ್ಮಾ ಹೇಳಿದರು. ನಗರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಮಕ್ಕಳು ಎದುರಿಸುವ ಸಮಸ್ಯೆಗಳು ವಿಭಿನ್ನವಾಗಿರುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.