

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರಪತಿಗಳು ತಮ್ಮ ಟ್ವೀಟ್ ನಲ್ಲಿ, ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ವಾರ್ತೆ ಕೇಳಿ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಕರ್ನಾಟಕ ರಾಜ್ಯದ ಜನತೆಗೆ ಮತ್ತು ಇಡೀ ದೇಶಕ್ಕೆ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.
Sad to hear of the passing of Union minister and veteran parliamentarian Shri H.N. Ananth Kumar. This is a tragic loss to public life in our country and particularly for the people of Karnataka. My condolences to his family, colleagues and countless associates #PresidentKovind
— President of India (@rashtrapatibhvn) November 12, 2018
ಎಬಿವಿಪಿಯ ರಾಜ್ಯ ಹಾಗೂ ರಾಷ್ಟ್ರೀಯ ಕಾರ್ಯದರ್ಶಿಗಳಾಗಿದ್ದ,ಕೇಂದ್ರದ ಮಂತ್ರಿ ಶ್ರೀ ಅನಂತ್ ಕುಮಾರ್ ರವರು ಇಹಲೋಕ ತ್ಯಜಿಸಿದ್ದಾರೆ. ಅವರ ದಿವ್ಯಾತ್ಮಕ್ಕೆ ಶಾಂತಿ ದೊರಕಲಿ