ಕೇಂದ್ರ ಸಚಿವ ಅನಂತ್ ಕುಮಾರ್ ಪಂಚಭೂತಗಳಲ್ಲಿ ಲೀನ

ರಾಜ್ಯ ಬಿಜೆಪಿಯ ಹಿರಿಯ ತಲೆಯಾಳು, ರಾಜಕೀಯ ಚತುರ, ಸತತ ಆರು ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸೋಲಿಲ್ಲದ ಸರದಾರ ಎನ್ನಿಸಿಕೊಂಡಿದ್ದ...
ಅನಂತ್ ಕುಮಾರ್ ಯುಗಾಂತ್ಯ: ಪಂಚಭೂತಗಳಲ್ಲಿ ಲೀನರಾದ 'ಅದಮ್ಯ ಚೇತನ'
ಅನಂತ್ ಕುಮಾರ್ ಯುಗಾಂತ್ಯ: ಪಂಚಭೂತಗಳಲ್ಲಿ ಲೀನರಾದ 'ಅದಮ್ಯ ಚೇತನ'
ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ತಲೆಯಾಳು, ರಾಜಕೀಯ ಚತುರ, ಸತತ ಆರು ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸೋಲಿಲ್ಲದ ಸರದಾರ ಎನ್ನಿಸಿಕೊಂಡಿದ್ದ ಕೇಂದ್ರ ಸಂಸದೀಯ ವ್ಯವಹಾರ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತ್ ಕುಮಾರ್ ಅವರು, ಚಾಮರಾಜಪೇಟೆಯ ಹಿಂದು ರುದ್ರಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. 
ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ವಿಧಿವಿಧಾನ ಹಾಗೂ ಸಕಲ ಸರ್ಕಾರಿ ಗೌರವಾಧಾರಗಳೊಂದಿಗೆ ಅನಂತ್ ಕುಮಾರ್ ಅವರು ಅಂತಿಮ ಸಂಸ್ಕಾರ ನೆರವೇರಿತು. 
ಕಳೆದ ಕೆಲ ದಿನಗಳಿಂದ ಶ್ವಾಸಕೋಶದ ಕ್ಯಾನ್ಸರ್ ಕಾರಣ ಚಿಕಿತ್ಸೆ ಪಡೆಯುತ್ತಿದ್ದ ಅನಂತ್ ಕುಮಾರ್ ಅವರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಬೆಂಗಳೂರಿನ ಬಸವನಗುಡಿ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿನ್ನೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದರು. 

ನಿನ್ನೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದರು. ಇಂದೂ ಕೂಡ ಹಲವು ಗಣ್ಯರು, ಕೇಂದ್ರ ಸಚಿವರು, ರಾಷ್ಟ್ರ ನಾಯಕರು ಆಗಮಿಸಿ ಪುಷ್ಪನಮನ ಸಲ್ಲಿಸಿದರು. ಎಲ್.ಕೆ. ಅಡ್ವಾಣಿ, ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಗಣ್ಯರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. 

ಅನಂತ್ ಕುಮಾರ್ ಅವರ ಸಹೋದರ ನಂದಕುಮಾರ್ ಅವರು ಅಂತಿಮ ವಿಧಾನವನ್ನು ನೆರವೇರಿಸಿದರು. ಬಳಿಕ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಗಲಿದ ನಾಯಕನಿಗೆ ಮೂರು ಸೇನೆಗಳ ಪ್ರಮುಖರು ಸರ್ಕಾರಿ ಗೌರವ ಸಲ್ಲಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com