ಪ್ರಮುಖವಾಗಿ ಇಡಿ ಡೀಲ್ ಪ್ರಕರಣದಲ್ಲಿ ಬಳ್ಳಾರಿಯ ಗಣಿ ಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಲಭ್ಯವಾದ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಆ ಪ್ರಕರಣದ ತನಿಖಾ ತಂಡದಲ್ಲಿದ್ದ ಸಿಸಿಬಿಯ ಮೂವರು ಎಸಿಪಿಗಳನ್ನು ಬುಧವಾರ ದಿಢೀರ್ ವರ್ಗಾವಣೆ ಮಾಡಿದ್ದಾರೆ. ಇಲಾಖೆ ಮೂಲಗಳು ತಿಳಿಸಿರುವಂತೆ ಸಿಸಿಬಿಯ ಎಸಿಪಿಗಳಾದ ಪಿ.ಟಿ.ಸುಬ್ರಹ್ಮಣ್ಯ, ಎಂ.ಎಚ್.ಮಂಜುನಾಥ್ ಚೌಧರಿ ಹಾಗೂ ಮರಿಯಪ್ಪ ಅವರನ್ನು ವರ್ಗಾಯಿಸಲಾಗಿದೆ.