ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ ಎಸ್ ನಿರ್ಮಾಣ: 125 ಅಡಿ ಎತ್ತರದ ಕಾವೇರಿ ತಾಯಿ ಪ್ರತಿಮೆ ಸ್ಥಾಪನೆ!

ಕೃಷ್ಣರಾಜಸಾಗರ ಜಲಾಶಯದ ಉದ್ಯಾನವನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ 1,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ನೀಲಿನಕ್ಷೆ ...
ಬೃಂದಾವನ ಗಾರ್ಡನ್
ಬೃಂದಾವನ ಗಾರ್ಡನ್
ಬೆಂಗಳೂರು: ಕೃಷ್ಣರಾಜಸಾಗರ ಜಲಾಶಯದ ಉದ್ಯಾನವನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ 1,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ನೀಲಿನಕ್ಷೆ ಸಿದ್ಧಪಡಿಸಿದೆ..
ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಯೋಜನೆ ರೂಪುರೇಷೆ ಬಗ್ಗೆ ಕೂಲಂಕಷ ಚರ್ಚೆ ನಡೆಸಿದ್ದಾರೆ.
ಪಾರಂಪರಿಕ ತಾಣದ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಬೃಂದಾವನವನ್ನು ವಿಶ್ವದ ಪ್ರವಾಸಿ ತಾಣಗಳಲ್ಲೇ ಅಗ್ರಗಣ್ಯ ಸ್ಥಾನದಲ್ಲಿ ನಿಲ್ಲಿಸುವುದು ಯೋಜನೆಯ ಮೂಲ ಉದ್ದೇಶವಾಗಿದೆ,
ಜಾಗತಿಕ ಟೆಂಡರ್ ಮೂಲಕ ವಿಶ್ವದರ್ಜೆಯ ಸಂಸ್ಥೆಗೆ ಯೋಜನೆ ಗುತ್ತಿಗೆ ವಹಿಸಿಕೊಡಲು ನಿರ್ಧರಿಸಲಾಗಿದೆ. ಉದ್ಯಾನದ ಅಭಿವೃದ್ಧಿಗೆ ಅಗತ್ಯವಾದ ಜಾಗ ನೀಡುವುದನ್ನು ಹೊರತುಪಡಿಸಿ ರಾಜ್ಯ ಸರ್ಕಾರ ಒಂದು ಪೈಸೆ ಬಂಡವಾಳ ಹೂಡುವುದಿಲ್ಲ. ಆದ್ದರಿಂದ ಟೆಂಡರ್​ನಲ್ಲಿ ಭಾಗವಹಿಸುವ ಸಂಸ್ಥೆ ಉತ್ತಮ ಆರ್ಥಿಕ ಹಿನ್ನೆಲೆ ಹೊಂದಿದ್ದು, ಕಲಾತ್ಮಕ ವಿನ್ಯಾಸದಲ್ಲಿ ಜಾಗತಿಕ ಮಟ್ಟದ ನೈಪುಣ್ಯ ಇರುವಂಥದ್ದನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
.
ಕೆಆರ್​ಎಸ್ ಉದ್ಯಾನದಲ್ಲಿ ದೋಣಿ ವಿಹಾರ ಸರೋವರದ ಪಕ್ಕದಲ್ಲಿ ಮತ್ತೊಂದು ಕೆರೆ ನಿರ್ಮಿಸಿ ಅದರ ಮಧ್ಯಭಾಗದಲ್ಲಿ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಚಯ ರೂಪುಗೊಳ್ಳಲಿದೆ. ಈ ಸಮುಚ್ಛಯ ಮೇಲ್ಭಾಗದಲ್ಲಿ ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆ ನಿರ್ವಣವಾಗಲಿದೆ. ಬೃಂದಾವನದ ಕಡೆಯಿಂದ ಇದು ಅಣೆಕಟ್ಟೆಯ ಎತ್ತರಕ್ಕಿಂತ ಹೆಚ್ಚಿರಲಿದೆ. 2 ಗೋಪುರವುಳ್ಳ ಗಾಜಿನಮನೆ ನಿರ್ವಣವಾಗಲಿದೆ. ಈ ಎರಡೂ ಕಟ್ಟಡಗಳಿಂದ ಅಣೆಕಟ್ಟೆಯ ವಿಹಂಗಮ ನೋಟ ಗೋಚರವಾಗಲಿದೆ.
ಬೃಂದಾವನದಿಂದ ರಾಜ್ಯ ಸರ್ಕಾರಕ್ಕೆ ಈಗ ಬರುತ್ತಿರುವ ವಾರ್ಷಿಕ ಆದಾಯ ಕೇವಲ 6 ಕೋಟಿ ರೂಪಾಯಿ. ಹೊಸ ಯೋಜನೆ ಪ್ರಕಾರ ವಾರ್ಷಿಕ 300 ಕೋಟಿ ರೂ.ಗೂ ಅಧಿಕ ವಹಿವಾಟು ನಡೆಯಲಿದ್ದು, ಸರ್ಕಾರಕ್ಕೆ 30 ಕೋಟಿ ರೂ. ವರಮಾನ ಬರಲಿದೆ ಎಂದು ಅಂದಾಜು ಮಾಡಲಾಗಿದೆ. 2 ವರ್ಷದಲ್ಲಿ ಯೋಜನೆ ಪೂರ್ಣ ಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ. ಈ ಯೋಜನೆ ಒಟ್ಟಾರೆ 400 ಎಕರೆ ಜಾಗದಲ್ಲಿ ಸಿದ್ಧವಾಗಲಿದ್ದು ಹೆಚ್ಚುವರಿಯಾಗಿ 300 ಎಕರೆಯನ್ನು ಮೀಸಲಿಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com