ಕಾವೇರಿ ಮಾತೆ ಪ್ರತಿಮೆಯನ್ನು ಸರ್ದಾರ್ ಪಟೇಲ್ ಪ್ರತಿಮೆಗೆ ಹೋಲಿಸಲಾಗದು- ಡಿ. ಕೆ. ಶಿವಕುಮಾರ್

ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆಯನ್ನು ಅಹಮದಾಬಾದಿನಲ್ಲಿ ಬಿಜೆಪಿ ಸರ್ಕಾರ ನಿರ್ಮಿಸಿರುವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಪ್ರತಿಮೆಯೊಂದಿಗೆ ಹೋಲಿಕೆ ಮಾಡಲಾಗದು ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಡಿ. ಕೆ. ಶಿವಕುಮಾರ್
ಡಿ. ಕೆ. ಶಿವಕುಮಾರ್
Updated on

ಬೆಂಗಳೂರು: ಕೃಷ್ಣರಾಜಸಾಗರ ಜಲಾಶಯದ ಉದ್ಯಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ   ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆಯನ್ನು ಅಹಮದಾಬಾದಿನಲ್ಲಿ ಬಿಜೆಪಿ ಸರ್ಕಾರ ನಿರ್ಮಿಸಿರುವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಪ್ರತಿಮೆಯೊಂದಿಗೆ ಹೋಲಿಕೆ ಮಾಡಲಾಗದು ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ, ಇತಿಹಾಸ ಮತ್ತು ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ನಿರ್ಮಾಣ ಪ್ರಸ್ತಾವವನ್ನು ಸಿದ್ಧಪಡಿಸಲಾಗಿದೆ. ಗುಜರಾತ್ ಸರ್ಕಾರ 3 ಸಾವಿರ ಕೋಟಿ ರೂ. ವೆಚ್ಚ ಮಾಡಿ  ಸರ್ದಾರ್ ವಲ್ಲಭ್ ಬಾಯಿ ಪಟೇಲ್  ಪ್ರತಿಮೆ ನಿರ್ಮಿಸಿದಂತೆ ಇಲ್ಲಿನ ಮೈತ್ರಿ ಸರ್ಕಾರ ಕಾವೇರಿ ಮಾತೆ ಪ್ರತಿಮೆ ನಿರ್ಮಾಣದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರದಲ್ಲಿ ಈ ಯೋಜನೆ ಕೈಗೊಳ್ಳಲು  ಪ್ರಸ್ತಾವ ಇನ್ನೂ ಪೂರ್ಣಗೊಂಡಿಲ್ಲ. ಅಗತ್ಯವಾದರೆ   ಬದಲಾವಣೆ ಮಾಡಲು ಯೋಚಿಸಲಾಗುವುದು ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಆರ್​ಎಸ್ ಉದ್ಯಾನದಲ್ಲಿ ದೋಣಿ ವಿಹಾರ ಸರೋವರದ ಪಕ್ಕದಲ್ಲಿ ಮತ್ತೊಂದು ಕೆರೆ ನಿರ್ಮಿಸಿ ಅದರ ಮಧ್ಯಭಾಗದಲ್ಲಿ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಚಯ ರೂಪುಗೊಳ್ಳಲಿದೆ. ಈ ಸಮುಚ್ಛಯ ಮೇಲ್ಭಾಗದಲ್ಲಿ ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆ ನಿರ್ಮಾಣದ ಪ್ರಸ್ತಾವವನ್ನು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com