ಮೈಸೂರು ಮೇಯರ್ ಗದ್ದುಗೆ ತಮಗೆ ಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ಅದರಂತೆ ಮೈಸೂರು ಪಾಲಿಕೆ ಕಾಂಗ್ರೆಸ್ ವಶವಾಗಿದೆ, ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸಿದ್ದಾರೆ. ಮೊದಲ 2 ವರ್ಷ ಮೇಯರ್ ಸ್ಥಾನ ಕಾಂಗ್ರೆಸ್ಗೆ ನಂತರದ 3 ವರ್ಷ ಮೇಯರ್ ಸ್ಥಾನ ಜೆಡಿಎಸ್ಗೆ ಎಂಬ ಒಪ್ಪಂದದ ಹಿನ್ನೆಲೆಯಲ್ಲಿ ಮೊದಲ ಅವಧಿಗೆ ಕಾಂಗ್ರೆಸ್ಗೆ ಮೇಯರ್ ಪಟ್ಟ ಬಿಟ್ಟುಕೊಟ್ಟಿದೆ