ಸಾಂದರ್ಭಿಕ ಚಿತ್ರ
ರಾಜ್ಯ
ರಾಜ್ಯದ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರಿಗೆ ಅಮೆರಿಕದ ಫುಲ್ ಬ್ರೈಟ್ ಸ್ಕಾಲರ್ ಶಿಪ್
ರಾಜ್ಯದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರು ಅಮೆರಿಕದ ಪ್ರತಿಷ್ಠಿತ ಫುಲ್ ಬ್ರೈಟ್ ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರು ಅಮೆರಿಕದ ಪ್ರತಿಷ್ಠಿತ ಫುಲ್ ಬ್ರೈಟ್ ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಜಾಲಹಳ್ಳಿಯ ಏರ್ ಫೋರ್ಸ್ ಸ್ಟೇಷನ್ ನಲ್ಲಿರುವ ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ರೇಣುಕಾ ಕೃಷ್ಣಗಿರಿ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ಬಳಿಯ ಮಲ್ಲುಪುರಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜೇಶ್ ವೈ.ಎನ್ ಅವರು ಅಮೆರಿಕದ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿದ್ದಾರೆ.
ಫುಲ್ ಬ್ರೈಟ್ ಸ್ಕಾಲರ್ ಶಿಪ್ ಪಡೆದಿರುವ ಈ ಇಬ್ಬರು ಶಿಕ್ಷಕರು 2019ರಲ್ಲಿ ಆರು ವಾರಗಳ ಕಾಲ ಅಮೆರಿಕ್ಕಕ್ಕೆ ತೆರಳಿ, ಅಲ್ಲಿನ ಶಾಲಾ, ಕಾಲೇಜ್ ಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿರುವ ಶಿಕ್ಷಣ ಪದ್ಧತಿ ಬಗ್ಗೆ ತಿಳಿದುಕೊಳ್ಳಲಿದ್ದಾರೆ.
ನಮ್ಮ ದೇಶದಿಂದ ಆಯ್ಕೆಯಾದ ಮೂವರು ಶಿಕ್ಷಕರ ಪೈಕಿ ನಮ್ಮ ರಾಜ್ಯದಿಂದಲೇ ಇಬ್ಬರು ಶಿಕ್ಷಕರು ಈ ಸ್ಕಾಲರ್ ಶಿಪ್ ಆಯ್ಕೆಯಾಗಿದ್ದಾರೆ.
ಗಣಿತ ಹಾಗೂ ವಿಜ್ಞಾನದ ವಿಷಯಗಳನ್ನು ಪಾಠ ಮಾಡುವ ರಾಜೇಶ್ ಹಾಗೂ ಶಿಕ್ಷಕಿ ರೇಣುಕಾ ವಿದ್ಯಾರ್ಥಿಗಳಿಗೆ ಹೊಸ ಹೊಸ ರೀತಿಯಲ್ಲಿ ಬೋಧನೆ ಮಾಡಿ ಹೆಸರುವಾಸಿಯಾಗಿದ್ದರು. ಈ ಇಬ್ಬರು ಶಿಕ್ಷಕರು ಪ್ರಬಂಧಗಳನ್ನು ಬರೆದು, ಸಂದರ್ಶನ ಎದುರಿಸಿ ಫುಲ್ ಬ್ರೈಟ್ ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ