ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ
ರಾಜ್ಯ
ಬೆಂಗಳೂರು: ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ; ನಾಲ್ವರ ಸಾವು
ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಹೊಸೂರಿನಲ್ಲಿ ನಡೆದಿದೆ....
ಬೆಂಗಳೂರು: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಹೊಸೂರಿನಲ್ಲಿ ನಡೆದಿದೆ.
ಅಂಬುಲೆನ್ಸ್ ಚಾಲಕ ಜಯ ಸೂರ್ಯ ಮತ್ತು ರೋಗಿ ಮದನ್ ಮೃತ ದುರ್ದೈವಿಗಳು. ಮತ್ತಿಬ್ಬರ ಹೆಸರು ತಿಳಿದು ಬಂದಿಲ್ಲ. ಹೊಸೂರು ಸಮೀಪದ ಸೀತಾರಾಮ್ ಮೆದು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಈ ಅಪಘಾತ ಸಂಭವಿಸಿದೆ.
ಮೃತ ಮದನ್ ಹಂದಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ತಿರುಚಿಯಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಸಂಬಂಧಿಕರು ಕರೆದುಕೊಂಡು ಬರುತ್ತಿದ್ದರು.
ಈ ಬಗ್ಗೆ ಮಾಹಿತಿ ತಿಳಿದ ಹೊಸೂರು ಹುಡ್ಕೋ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ