ಪೇಜಾವರ ಶ್ರೀಗಳ ಬೆಂಗಾವಲು ವಾಹನಕ್ಕೆ ಅಪಘಾತ: ದಂಪತಿ ದುರ್ಮರಣ

ಉಡುಪಿಯ ಪೇಜಾವರ ಶ್ರೀಗಳಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಮತ್ತು ಇಂಡಿಗೋ ಕಾರಿನ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿರುವ ....
ಪೇಜಾವರ ಶ್ರೀಗಳು
ಪೇಜಾವರ ಶ್ರೀಗಳು
ಚಿಕ್ಕಾಬಳ್ಳಾಪುರ: ಉಡುಪಿಯ ಪೇಜಾವರ ಶ್ರೀಗಳಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಮತ್ತು ಇಂಡಿಗೋ ಕಾರಿನ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ರಾಮಕೃಷ್ಣಯ್ಯ(75) ಸರ್ವಲೋಚನಾ(70) ಮೃತ ದಂಪತಿ. ನಾಮಕರಣ ಕಾರ್ಯಕ್ರಮಕ್ಕೆ ಜ್ಯುವೆಲ್ಲರಿ ಶಾಪ್ ಮಾಲೀಕರಾದ ರಾಮಕೃಷ್ಣಯ್ಯ ಕುಟುಂಬ ಸಮೇತ ಚಿಂತಾಮಣಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮತ್ತೊಂದೆಡೆ ಡಿಕ್ಕಿಯಾದ ಹೈವೇ ಪ್ಯಾಟ್ರೋಲಿಂಗ್ ಪೊಲೀಸ್ ವಾಹನದ ಚಾಲಕ ಸೇರಿದಂತೆ ಎಎಸ್ ಶಂಭಯ್ಯ ಕೂಡ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಪೇಜಾವರ ಶ್ರೀಗಳು ಚಿಂತಾಮಣಿ ತಾಲೂಕಿನ ಕೋನಕುಂಟ್ಲು ಗ್ರಾಮದಲ್ಲಿ ನಡೆಯುತ್ತಿರುವ ಕಾನ್ವ ಸಮ್ಮೇಳನದಲ್ಲಿ ಭಾಗವಹಿಸಿಲು ಬೆಂಗಳೂರಿನಿಂದ ಚಿಂತಾಮಣಿ ಕಡೆಗೆ ತೆರಳುತ್ತಿದ್ದರು.
ಪೊಲೀಸ್ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆ ಕಾರಿನಲ್ಲಿದ್ದ ಇಬ್ಬರು ಮೃತರಾಗಿದ್ದಾರೆ. ಈ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com