ಖಾಲಿ ಇರುವ 10,445 ಹುದ್ದೆ ಭರ್ತಿ ಮಾಡಲು ಕುಮಾರಸ್ವಾಮಿ ಸರ್ಕಾರ ಮುಂದು

ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರರ ಹುದ್ದೆಗಳು ಖಾಲಿ ಇರುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿರುವುದನ್ನು ಮನಗಂಡಿರುವ ಸರ್ಕಾರ ತುರ್ತಾಗಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರರ ಹುದ್ದೆಗಳು ಖಾಲಿ ಇರುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿರುವುದನ್ನು ಮನಗಂಡಿರುವ ಸರ್ಕಾರ ತುರ್ತಾಗಿ ನೇಮಕ ಕಾರ್ಯ ನಡೆಸಲು ನಿರ್ಧರಿಸಿದೆ.
ವಿಧಾನದ ಅನುಚ್ಛೇದ 371ಜೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ವೃಂದ ರಚಿಸಿ, ಅಧಿಸೂಚಿಸಿ, ಖಾಲಿ ಹುದ್ದೆಗಳನ್ನು ತುಂಬುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.
ಎಲ್ಲಾ  ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿರುವ ಮುಖ್ಯ ಕಾರ್ಯದರ್ಶಿ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಿದ್ದಾರೆ, ನಗರಾಭಿವೃದ್ಧಿ ಇಲಾಖೆಯಲ್ಲಿ ಅತಿ ಹೆಚ್ಚು ಅಂದರೆ 3,467 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ.
ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರವೇ ಪೂರ್ಣಗೊಳಿಸಬೇಕೆಂದು ಆದೇಶ ಹೊರಡಿಸಲಾಗಿದೆ, ಹೈದರಾಬಾದ್ ಕರ್ನಾಟಕ ಭಾಗಕ್ಕೆ ಹೆಚ್ಚಿನ ಹುದ್ದೆ ನೀಡಲು ನಿರ್ದರಿಸಲಾಗಿದೆ.  ಹಲವು ಇಲಾಖೆಗಳಲ್ಲಿ  ಹೆಚ್ಚಿನ ಹುದ್ದೆ ಖಾಲಿಯಿದ್ದು, ದೈನಂದಿನ ಕೆಲಸಗಳಗಳು ವಿಳಂಭವಾಗುತ್ತಿವೆ, ಈ ಹಿನ್ನೆಲೆಯಲ್ಲಿ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿಜಯ್ ಭಾಸ್ಕರ್ ತಿಳಿಸಿದ್ದಾರೆ.  ಈ ವರ್ಷದ ಅಂತ್ಯದೊಳಗೆ ಎಲ್ಲಾ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ವರದಿಗಳ ಪ್ರಕಾರ  ಸರ್ಕಾರದ ವಿವಿಧ ಇಲಾಖೆಗಳಲ್ಲಿ 1.67 ಲಕ್ಷ ಹುದ್ದೆ ಖಾಲಿಯಿವೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com