ರೈತರು, ರೈತ ನಾಯಕರ ವಿರುದ್ಧ ದಾಖಲಾಗಿದ್ದ ಹಳೇ ಕೇಸುಗಳು ರದ್ದು: ಸಿಎಂ ಕುಮಾರಸ್ವಾಮಿ

ರೈತರು ಹಾಗೂ ರೈತ ನಾಯಕರ ವಿರುದ್ಧ ಕಳೆದ 7-8 ವರ್ಷಗಳಿಂದ ದಾಖಲಾಗಿರುವ ಪ್ರಕರಣಗಳನ್ನು ರದ್ದು ಪಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...
ಸಿಎಂ ಕುಮಾರಸ್ವಾಮಿ
ಸಿಎಂ ಕುಮಾರಸ್ವಾಮಿ
Updated on: 
ಬೆಂಗಳೂರು: ರೈತರು ಹಾಗೂ ರೈತ ನಾಯಕರ ವಿರುದ್ಧ ಕಳೆದ 7-8 ವರ್ಷಗಳಿಂದ ದಾಖಲಾಗಿರುವ ಪ್ರಕರಣಗಳನ್ನು ರದ್ದು ಪಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ. 
ಕಬ್ಬಿನ ಬಾಕಿ ಹಣಕ್ಕಾಗಿ ಹೋರಾಟಕ್ಕಿಳಿದಿರುವ ರೈತರೊಂದಿಗೆ ನಿನ್ನೆಯಷ್ಟೇ ಸಂಧಾನ ಸಭೆ ನಡೆಸಿದ ಕುಮಾರಸ್ವಾಮಿಯವರು ರೈತರ ಮನವೊಲಿಸುವಲ್ಲಿ ಯಶಸ್ವಿಯಾದರು. 
ಮಾತುಕತೆ ಬಳಿಕ ಸುದ್ದಿಗೊರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರ ಮೇಲೆ ಹಾಕಿರುವ ಪ್ರಕರಣ ಸೇರಿದಂತೆ ಕಳೆದ 7-8 ವರ್ಷಗಳಿಂದ ಹೋರಾಟ ನಡೆಸಿದ್ದ ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನೂ ರದ್ದು ಪಡಿಸುವುದಾಗಿ ಭರವಸೆ ನೀಡಿದ್ದಾರೆ. 
ರೈತರ ಮೇಲಿನ ಪ್ರಕರಣಗಳನ್ನು ರದ್ದು ಪಡಿಸುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com