ಲೋಕಸಭೆ ಚುನಾವಣೆಗೆ ಮುನ್ನ ಬೆಳೆ ಸಾಲ ಮನ್ನಾ ಅನಿಶ್ಚಿತ, ಗೌಡರ ರಾಜಕೀಯ ಲೆಕ್ಕಾಚಾರ ತಲೆಕೆಳಗು?

2019ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು/ಕಲಬುರಗಿ: 2019ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಅವರ ತಂದೆ ಹೆಚ್ ಡಿ ದೇವೇಗೌಡರ ಕನಸು ಈಡೇರುವ ಸಾಧ್ಯತೆ ಕಡಿಮೆಯೆಂದು ಹೇಳಲಾಗುತ್ತಿದೆ. ರೈತರ ಬೆಳೆ ಸಾಲ ಮನ್ನಾ ಆಗಲು ಇನ್ನು ಕನಿಷ್ಠ 2 ವರ್ಷಗಳಾದರೂ ಬೇಕಾಗಬಹುದು ಎಂದು ಅಧಿಕಾರಿಗಳು ಹೇಳುತ್ತಾರೆ.

ಬೆಂಗಳೂರು ಗ್ರಾಮೀಣ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿ ಬೆಳೆ ಸಾಲ ಮನ್ನಾವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದ್ದು, ಈ ವರ್ಷಾಂತ್ಯಕ್ಕೆ ಫಲಾನುಭವಿಗಳೆಲ್ಲರ ಮಾಹಿತಿಯನ್ನು ಸರ್ಕಾರ ಪೂರ್ಣಗೊಳಿಸುವ ಸಾಧ್ಯತೆಯಿದೆ. ಪ್ರಾಯೋಗಿಕ ಬೆಳೆ ಸಾಲ ಮನ್ನಾ ಯೋಜನೆ ಜಾರಿಗೊಳಿಸಿದ್ದು ಹಂತ ಹಂತವಾಗಿ ಮುಂದುವರಿಯುತ್ತಿದ್ದು ಬ್ಯಾಂಕುಗಳಿಗೆ ಫಲಾನುಭವಿಗಳ ಪರಿಶೀಲನೆ ಡಿಸೆಂಬರ್ 10ಕ್ಕೆ ಕೊನೆಯಾಗುವ ನಿರೀಕ್ಷೆಯಿದೆ.

ಬೆಳೆ ಸಾಲ ಮನ್ನಾ ಯೋಜನೆ ಜಾರಿಯಲ್ಲಿರುವ ಹಲವು ವಿಷಯಗಳನ್ನು ದಿನನಿತ್ಯದ ಮಾದರಿಯಲ್ಲಿ ಪರಿಶೀಲಿಸಲಾಗುತ್ತಿದೆ ಬೇರೆ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಆಗಲು ನಾಲ್ಕು ವರ್ಷಗಳ ಬೇಕಾಗಿದ್ದವು ಎಂದು ಅಧಿಕಾರಿಗಳು ಹೇಳುತ್ತಾರೆ. ಸೇಡಂ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿನ ಬ್ಯಾಂಕು ಅಧಿಕಾರಿಗಳು ಕೂಡ ಯಾವ ರೈತರಿಗೂ ಡಿಸೆಂಬರ್ ಅಂತ್ಯದೊಳಗೆ ಬೆಳೆ ಸಾಲ ಮನ್ನಾ ಆಗಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಬೆಳೆಸಾಲದ ಗಾತ್ರ ಮತ್ತು ಮನ್ನಾ ಆಗಲು ಇರುವ ಪ್ರಕ್ರಿಯೆ ಹಾಗೂ ರೈತರ ವಿವರಗಳ ಪರಿಶೀಲನೆಯಿಂದ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.

ಕಳೆದ ಜುಲೈ 5ರಂದು ಮಂಡಿಸಿದ್ದ ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಬಗ್ಗೆ ಕುಮಾರಸ್ವಾಮಿ ಘೋಷಿಸಿದ್ದರು. ಇದರಿಂದ 28 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ಕೂಡ ಹೇಳಿದ್ದರು. 2019ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸಿಕೊಳ್ಳಲು ರೈತರ ಸಾಲಮನ್ನಾ ಉತ್ತಮ ಮಾರ್ಗ ಎಂಬುದು ಹೆಚ್ ಡಿ ಕುಮಾರಸ್ವಾಮಿ ಮತ್ತು ಅವರ ತಂದೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ರಾಜಕೀಯ ಲೆಕ್ಕಾಚಾರವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com