ಬೆಂಗಳೂರು: ಶಾಲಾ ಕೊಠಡಿಯಲ್ಲೇ ಶಿಕ್ಷಕಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡು ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಾಲಹಳ್ಳಿ ಸಮೀಪ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಾಲಹಳ್ಳಿ ಸಮೀಪ ನಡೆದಿದೆ. 
ಕಮ್ಮಗೊಂಡನಹಳ್ಳಿಯ ಅಶೋಕ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಶಿಕ್ಷಕಿ ಎಂ.ಪಿ.ಸುಮತಿ (28) ಮೃತ ದುರ್ದೈವಿ. 
ಮಂಗಳವಾರ ಸಂಜೆ ಶಾಲೆ ಮುಗಿದ ಬಳಿಕ ಸುಮತಿ, ಮನೆಗೆ ತೆರಳದೆ ಎಲ್'ಕೆಜಿ ತರಗತಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಮರುದಿನ ಈದ್ ಮಿಲಾದ್ ನಿಮಿತ್ತ ಶಾಲೆ ರಜೆ ಇತ್ತು. ಹೀಗಾಗಿ ಆತ್ಮಹತ್ಯೆ ಘಟನೆ ಯಾರಿಗೂ ಗೊತ್ತಾಗಿಲ್ಲ. ಗುರುವಾರ ಬೆಳಿಗ್ಗೆ ಶಾಲಾ ಸಿಬ್ಬಂದಿ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಕ್ಕಳಿಲ್ಲದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com