ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್'ಎಸ್ಎಸ್) ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಆರೋಪಿ ಅಸೀಂ ಶರೀಫ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ...
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್'ಎಸ್ಎಸ್) ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಆರೋಪಿ ಅಸೀಂ ಶರೀಫ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಪ್ರಕರಣ ಸಂಬಂಧ ಅಸೀಂ ಶರೀಫ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಸುಧೀಂದ್ರ ರಾವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ನಿನ್ನೆ ಧಾರವಾಡ ನ್ಯಾಯಪೀಠದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತೀರ್ಪು ಪ್ರಕಟಿಸಿತು.
2016ರ ಅಕ್ಟೋಬರ್ 16ರಂದು ಬೆಳಿಗ್ಗೆ 9ಕ್ಕೆ ಶಿವಾಜಿನಗರದ ಕಾಮರಾಜ ರಸ್ತೆಯ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ಸ್ನೇಹಿತರೊಂದಿಗೆ ನಿಂತಿದ್ದ ರುದ್ರೇಶ್ ಅವರನ್ನು 2 ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.