ಬಿಜಿಎಸ್ ಗೆ ಡೀಮ್ಡ್ ವಿವಿ ಸ್ಥಾನಮಾನ: ರಾಜ್ಯ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಲಿದೆ: ಸಿಎಂ

ಬಿಜಿಎಸ್ ಶಿಕ್ಷಣ ಸಂಸ್ಥೆ ಡೀಮ್ಡ್ ವಿಶ್ವವಿದ್ಯಾಲಯ ಮಾನ್ಯತೆ ನೀಡುವ ಕುರಿತು ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಸಿಎಂ ...
ಸಂಸ್ಥಪನಾ ದಿನ ಕಾರ್ಯಕ್ರಮದಲ್ಲಿ ಸಿಎಂ ಕುಮಾರ ಸ್ವಾಮಿ, ನಿರ್ಮಲಾನಂದ ಸ್ವಾಮೀಜಿ ಮತ್ತು ಸದಾನಂದಗೌಡ
ಸಂಸ್ಥಪನಾ ದಿನ ಕಾರ್ಯಕ್ರಮದಲ್ಲಿ ಸಿಎಂ ಕುಮಾರ ಸ್ವಾಮಿ, ನಿರ್ಮಲಾನಂದ ಸ್ವಾಮೀಜಿ ಮತ್ತು ಸದಾನಂದಗೌಡ
ಬೆಂಗಳೂರು:  ಬಿಜಿಎಸ್ ಶಿಕ್ಷಣ ಸಂಸ್ಥೆ ಡೀಮ್ಡ್ ವಿಶ್ವವಿದ್ಯಾಲಯ ಮಾನ್ಯತೆ ನೀಡುವ ಕುರಿತು ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬಿಜಿಎಸ್ ಹೆಲ್ತ್ ಅಂಡ್ ಎಜುಕೇಷನ್ ಸಿಟಿ ಕ್ಯಾಂಪಸ್‍ನ ಆವರಣದಲ್ಲಿಂದು ಹಮ್ಮಿಕೊಂಡಿದ್ದ 11ನೆ ಸಂಸ್ಥಾಪನಾ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವ-2018ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿಜಿಎಸ್ ಶಿಕ್ಷಣ ಸಂಸ್ಥೆ ವಿಶ್ವವಿದ್ಯಾಲಯವನ್ನಾಗಿ ಘೋಷಣೆ ಮಾಡಲು ಅಗತ್ಯವಿರುವ ಸೌಲಭ್ಯ ಒದಗಿಸಿಕೊಡುವುದು ನಮ್ಮ ಕರ್ತವ್ಯವಾಗಿದೆ. ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆದಿ ಚುಂಚನಗಿರಿ ಮಠದ ಅಧೀನದಲ್ಲಿ 500ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. 1.30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಭೈರವೈಕ್ಯ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಶಿಕ್ಷಣ, ಆರೋಗ್ಯ, ಪರಿಸರ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಉತ್ತಮ ಕೊಡುಗೆಗಳನ್ನು ನೀಡಿದ್ದು, ಈ ಪರಂಪರೆಯನ್ನು ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದುವರಿಸಿಕೊಂಡು ಬರುತ್ತಿದ್ದಾರೆ. 
ಕೇಂದ್ರದ ಅಂಕಿ-ಅಂಶ ಮತ್ತು ಕಾರ್ಯಕ್ರಮ ಜಾರಿ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಬಿಜಿಎಸ್ ಶಿಕ್ಷಣ ಸಂಸ್ಥೆಯನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮಾಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟರೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ಸಹಕಾರ ನೀಡಬೇಕು ಎಂದು ಹೇಳಿದರು.
ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಸಂಸ್ಕಾರವಂತ ಸಮಾಜ ನಿರ್ಮಾಣಕ್ಕೆ ಹಾಗೂ ಸಾಮಾಜಿಕ ಅಭ್ಯುದಯಕ್ಕೆ ಶ್ರಮಿಸಿದ ಮಹಾನ್ ಪುರುಷರು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ಅವರ ಮಾರ್ಗದಲ್ಲಿ ನಾವೆಲ್ಲಾ ಮುನ್ನಡೆಯಬೇಕು ಕರೆ ನೀಡಿದರು. ಪ್ರಾಂಶುಪಾಲ ಪುಟ್ಟರಾಜು ಹಾಗೂ ಕೆ.ಎಸ್. ಕುಮಾರಸ್ವಾಮಿ ಅವರಿಗೆ ಬಿಜಿಎಸ್ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com