ಮಂಡ್ಯದಲ್ಲಿ ಅಭಿಮಾನಿಗಳಿಂದ ರೆಬೆಲ್ ಸ್ಟಾರ್ ಗೆ ಅಂತಿಮ ನಮನ
ನಿವಾರ ಸಂಜೆ ನಿಧನರಾದ ರೆಬೆಲ್ ಸ್ಟಾರ್ ಅಂಬರೀಶ್ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣದಿಂದ ಮಂಡ್ಯಕ್ಕೆ ತರಲಾಗಿದೆ.ಇಂದು ಸಂಜೆ 5 ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಮಂಡ್ಯದಲ್ಲಿ.....
ಮಂಡ್ಯದಲ್ಲಿ ಅಭಿಮಾನಿಗಳಿಂದ ರೆಬೆಲ್ ಸ್ಟಾರ್ ಗೆ ಅಂತಿಮ ನಮನ
ಮಂಡ್ಯ: ಶನಿವಾರ ಸಂಜೆ ನಿಧನರಾದ ರೆಬೆಲ್ ಸ್ಟಾರ್ ಅಂಬರೀಶ್ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣದಿಂದ ಮಂಡ್ಯಕ್ಕೆ ತರಲಾಗಿದೆ.ಇಂದು ಸಂಜೆ 5 ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಮಂಡ್ಯದಲ್ಲಿ ಅಂಬರೀಶ್ ಅಭಿಮಾನಿಗಳಿಗಾಗಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಸಧ್ಯ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂಬರೀಶ್ ಮೃತದೇಹವನ್ನು ಇರಿಸಲಾಗಿದ್ದು ಅಭಿಮಾನಿಗಳು, ಸಾರ್ವಜನಿಕರು ಸಾಗರೋಪಾದಿಯಲ್ಲಿ ಬಂದು ತಮ್ಮ ಪಾಲಿನ ಅಂಬಿ ಅಣ್ಣನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಅಂಬರೀಶ್ ಪಾರ್ಥಿವ ಶರೀರವನ್ನು ಠೀರವ ಕ್ರೀಡಾಂಗಣದಿಂದ ವಿಶೇಷ ಅಂಬುಲೆನ್ಸ್ ಮೂಲಕ ಝಿರೋ ಟ್ರಾಫಿಕ್ ವ್ಯವಸ್ಥೆ ಮೂಲಕ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಅಲ್ಲಿಂದ ವಾಯುಪಡೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಮಂಡ್ಯಕ್ಕೆತರಲಾಗಿದೆ.
ಮಂಡ್ಯದ ಸರ್ ಎಂ.ವಿ. ಕ್ರೀಡಾಂಗಣದ ಒಂದು ಪಾರ್ಶ್ವದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿದ್ದು ಮುಂಜಾಗ್ರತೆಯಾಗಿ ಪೋಲೀಸರು ವ್ಯಾಪಕ ಭದ್ರತೆ ಕೈಗೊಂಡಿದ್ದಾರೆ.
ನಾಳೆ (ಸೋಮವಾರ) ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.