ಜನಾರ್ಧನ ಪೂಜಾರಿ ಆರೋಗ್ಯದ ಕುರಿತು ಸುಳ್ಳು ಸಂದೇಶ ಪ್ರಸಾರ: ದೂರು ದಾಖಲು

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಆರೋಗ್ಯದ ಕುರಿತು ಸಾಮಾಜಿಕ ತಾಣಗಳಲ್ಲಿ ಸುಳ್ಳು ಸಂದೇಶ ಪ್ರಸಾರವಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ
ಬಿ. ಜನಾರ್ಧನ ಪೂಜಾರಿ
ಬಿ. ಜನಾರ್ಧನ ಪೂಜಾರಿ
Updated on
ಬಂಟ್ವಾಳ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಆರೋಗ್ಯದ ಕುರಿತು ಸಾಮಾಜಿಕ ತಾಣಗಳಲ್ಲಿ ಸುಳ್ಳು ಸಂದೇಶ ಪ್ರಸಾರವಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಕುರಿತು ಸುಳ್ಳು ಸಂದೇಶ ಕಳಿಸಿದವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ದೂರು ಸಲ್ಲಿಸಿದ್ದು "ಕಳೆದ ಎರಡು ದಿನಗಳಿಂದ ಕೆಲ ಕಿಡಿಗೇಡಿಗಳು ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಏರುಪೇರಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹಬ್ಬಿಸುತ್ತಿದ್ದಾರೆ" ಎಂದು ದೂರಿನಲ್ಲಿ ಹೇಳಿದ್ದಾರೆ.
ಈ ರೀತಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಪೋಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ಸತ್ಯ ಸಂಗತಿ ಎಂದರೆ ಜನಾರ್ಧನ ಪೂಜಾರಿ ಆರೋಗ್ಯವಾಗಿದ್ದು ಬಂಟ್ವಾಳದ ತಮ್ಮ ಸ್ವಗೃಹದಲ್ಲಿ ಕುಟುಂಬಸ್ಥರೊಡನೆ ಸಂತಸದಿಂದ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com