'ಮೇಕೆದಾಟು'ಗೆ ಕೇಂದ್ರದ ಒಪ್ಪಿಗೆ ಹಿನ್ನಲೆ: ಡಿ.6ರಂದು ಮಾಜಿ ಸಿಎಂ ಸಿದ್ದು, ಸಿಎಂ ಎಚ್ ಡಿಕೆ ನೇತೃತ್ವದಲ್ಲಿ ಸಭೆ

ಕರ್ನಾಟಕ ರಾಜ್ಯದ ಬಹು ಉದ್ದೇಶಿತ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಪ್ರಾಥಮಿಕ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೇ ಡಿಸೆಂಬರ್ 6ರಂದು ಸಭೆ ನಡೆಸಿ ಚರ್ಚೆ ನಡೆಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕರ್ನಾಟಕ ರಾಜ್ಯದ ಬಹು ಉದ್ದೇಶಿತ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಪ್ರಾಥಮಿಕ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೇ ಡಿಸೆಂಬರ್ 6ರಂದು ಸಭೆ ನಡೆಸಿ ಚರ್ಚೆ ನಡೆಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ಅವರು, ಮೇಕೆದಾಟು ಯೋಜನೆ ಕುರಿತು ನಾವು ಈಗಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಡಿಸೆಂಬರ್ 14ರಂದು ನ್ಯಾಯಾಲಯದಲ್ಲಿ ವಿಚಾರಣೆ ಮತ್ತು ತೀರ್ಪು ಬಾಕಿ ಇದೆ. ಈ ಪರಿಸ್ಥಿತಿಯಲ್ಲಿ ಯೋಜನೆ ಕುರಿತು ಪ್ರತಿಕ್ರಿಯೆ ನೀಡುವುದು ಸರಿಯಲ್ಲ.  ಆದರೆ ಡಿಸೆಂಬರ್ 6ರಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.
ಅಂಬಿ ವ್ಯಕ್ತಿತ್ವಕ್ಕೆ ಹೊಂದುವ ರೀತಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಚಿಂತನೆ
ಇದೇ ವೇಳೆ ನಟ ಅಂಬರೀಶ್ ಸ್ಮಾರಕ ನಿರ್ಮಾಣದ ಕುರಿತು ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ಅವರು, ಅಂಬರೀಶ್ ಅವರ ವ್ಯಕ್ತಿತ್ವಕ್ಕೆ ಸರಿಹೊಂದುವ ರೀತಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಂತೆಯೇ ವಿಷ್ಣು ಸ್ಮಾರಕ ನಿರ್ಮಾಣವೂ ಕೂಡ ನಮ್ಮ ಉದ್ದೇಶವಾಗಿದೆ. ಆದರೆ ಆ ಬಗ್ಗೆ ಮಾತನಾಡುವ ಹಕ್ಕು ತಮಗಿಲ್ಲ ಎಂದು ಡಿಕೆಶಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com