ಜಿಲ್ಲಾಧಿಕಾರಿಗಳಿಗೂ ಗ್ರಾಮ ವಾಸ್ತವ್ಯ ಕಡ್ಡಾಯ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಗ್ರಾಮ ವಾಸ್ತವ್ಯ ಮಾಡಲೇಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ
ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ

ಬೆಂಗಳೂರು: ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಗ್ರಾಮ ವಾಸ್ತವ್ಯ ಮಾಡಲೇಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಬರ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿರುವ ಕಾರಣ ಅಲ್ಲಿನ ಪರಿಸ್ಥಿತಿ ಹಾಗೂ ಜನರ ಸಮಸ್ಯೆಗಳನ್ನು ಆಲಿಸಲು ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ನಡೆಸಲೇಬೇಕು ಎಂದರು.

ಕೊಡಗು ನೆರೆ ಪರಿಸ್ಥಿತಿಯಿಂದ ಒಟ್ಟು 4 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಇದರಲ್ಲಿ 546 ಕೋಟಿ ರೂಪಾಯಿಯನ್ನು ಮಾತ್ರ ಕೇಂದ್ರ ಸರ್ಕಾರ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 100 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಇನ್ನು ಕೆಲ ತಾಲೂಕುಗಳನ್ನು ಈ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದರು.

ಜನಸಾಮಾನ್ಯರು ವಿಧಾನಸೌಧಕ್ಕೆ ಬರುವುದನ್ನು ತಪ್ಪಿಸಿ ಜಿಲ್ಲಾಧಿಕಾರಿಗಳೇ ಸಮಸ್ಯೆ ಆಲಿಸುವಂತೆ ಸೂಚಿಸಲಾಗಿದೆ.ಜೊತೆಗೆ ಪ್ರತಿ ತಿಂಗಳು ಗ್ರಾಮ ವಾಸ್ತವ್ಯ ಹೂಡುವಂತೆ ಹೇಳಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com