ಬೆಂಗಳೂರು: ಬೆಂಗಳೂರಿನ ದೇವನಹಳ್ಳಿ ಬಳಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ.
ವಿಮಾನ ನಿಲ್ದಾಣ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗುರುತು ಸಿಗದ ಸ್ಥಿತಿಯಲ್ಲಿರುವ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.