ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ ಹೃದಯಾಘಾತದಿಂದ ನಿಧನ

ಕೋಲಾರದ ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಎಂ. ಭಕ್ತವತ್ಸಲಂ
ಎಂ. ಭಕ್ತವತ್ಸಲಂ
Updated on: 

ಕೆಜಿಎಫ್: ಕೋಲಾರದ  ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಜೆಡಿಎಸ್ ಮಾಜಿ ಶಾಸಕರು ಆಗಿದ್ದ ಎಂ.ಭಕ್ತವತ್ಸಲಂ ಅವರಿಗೆ ನಿನ್ನೆ ಸಂಜೆ ಎದೆನೋವು ಕಾಣಿಸಿಕೊಂಡಿದ್ದು,  ಚಿಕಿತ್ಸೆಗಾಗಿ ಕೋಲಾರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎಐಎಡಿಎಂಕೆ ಟಿಕೆಟ್ ನಿಂದ ಮೂರು ಬಾರಿ ರಾಜ್ಯ ವಿಧಾನಸಭೆಗೆ ಭಕ್ತವತ್ಸಲಂ ಆಯ್ಕೆಯಾಗಿದ್ದರು. ನಗರಸಭೆ ಹಾಗೂ ಕೆಜಿಎಫ್ ಅಭಿವೃದ್ದಿ ಪ್ರಾಧಿಕಾರದ  ಅಧ್ಯಕ್ಷರಾಗಿ ಐದು ವರ್ಷ ಸೇವೆ ಸಲ್ಲಿಸಿದ್ದರು. 12ವರ್ಷದ ಹಿಂದೆ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್  ಸೇರಿದ್ದ  ಭಕ್ತವತ್ಸಲಂ, ಎರಡು ಬಾರಿಯೂ ವಿಧಾನಸಭೆ ಚುನಾವಣೆಗೆ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು.

ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಭಕ್ತವತ್ಸಲಂ ನಿಧನಕ್ಕೆ ಹಲವು ರಾಜಕೀಯ ಪಕ್ಷಗಳ ನಾಯಕರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com