ಸಾಮಾಜಿಕ ಮಾಧ್ಯಮಗಳು ದ್ವೇಷ, ಅಸೂಯೆ ಬಿತ್ತಬಾರದು: ನಿರ್ಮಲಾ ಸೀತಾರಾಮನ್

ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಯ, ಅವಹೇಳನಕಾರಿ ಟ್ರೋಲಿಂಗ್ ಗಳು ಮತ್ತು ಸೈಬರ್ ಬೆದರಿಕೆಗಳು...
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಯ, ಅವಹೇಳನಕಾರಿ ಟ್ರೋಲಿಂಗ್ ಗಳು ಮತ್ತು ಸೈಬರ್ ಬೆದರಿಕೆಗಳು ಬರುತ್ತಿರುವ ಸಂದರ್ಭದಲ್ಲಿ, ಸಾಮಾಜಿಕ ಮಾಧ್ಯಮಗಳು ದ್ವೇಷ, ಕಹಿ, ನಕಾರಾತ್ಮಕತೆಯಿಂದ ಮುಕ್ತವಾಗಿರಬೇಕು. ಉತ್ತಮ ವಿಷಯಗಳ ಚರ್ಚೆ, ಹಂಚಿಕೆಗಳ ವೇದಿಕೆಯಾಗಬೇಕು ಎಂದು ಕೇಂದ್ರ ರಕ್ಷಣಾ ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅವರು ನಿನ್ನೆ ಬೆಂಗಳೂರಿನಲ್ಲಿ ನಮಸ್ತೆ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಸಭೆ-2018ರ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದಲ್ಲಿ ಬೆಳವಣಿದೆ ಒಂದು ಹಂತಕ್ಕೆ ತಲುಪಿದೆ. ಎಷ್ಟರ ಮಟ್ಟಿಗೆ ಎಂದರೆ ಇನ್ನು ಮುಂದೆ ಯಾವುದೇ ರೋಗ ರುಜಿನಗಳು ಮತ್ತು ಅನಾರೋಗ್ಯಕರ ಪರಿಸ್ಥಿತಿ ಉಂಟಾಗುವುದಿಲ್ಲ ಎಂಬ ಹಂತಕ್ಕೆ ಭಾರತ ಇಂದು ಬಂದು ನಿಂತಿದೆ ಎಂದರು.

ಸಂಸದರ ಆದರ್ಶ ಗ್ರಾಮ ಯೋಜನೆ ಮೂಲಕ ಗ್ರಾಮೀಣಾಭಿವೃದ್ಧಿ ನಡೆಯುತ್ತಿದೆ ಎಂದರು. ಸಾಮಾಜಿಕ ಮಾಧ್ಯಮಗಳನ್ನು ಇಂದು ದ್ವೇಷಮುಕ್ತಗೊಳಿಸಬೇಕಿದೆ ಎಂದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ದೇಶದಿಂದ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯಲು ಪ್ರಯತ್ನಿಸುತ್ತಿದ್ದಾರೆ.ಬ್ಯಾಂಕುಗಳಿಗೆ ಶೇಕಡಾ 98ರಷ್ಟು ಕಪ್ಪು ಹಣ ವಾಪಸ್ಸಾಗಿದೆ. ಭ್ರಷ್ಟರಾದ ನೀರವ್ ಮೋದಿ, ವಿಜಯ್ ಮಲ್ಯ ದೇಶ ಬಿಟ್ಟು ಓಡಿಹೋಗಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸುತ್ತಿದೆ, ಆದರೆ ಪ್ರಾಮಾಣಿಕ, ಭ್ರಷ್ಟಾಚಾರರಹಿತ ವ್ಯಕ್ತಿ ದೇಶದ ಪ್ರಧಾನಿಯಾಗಿ ಆಳ್ವಿಕೆ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com