ಅಕ್ಟೋಬರ್ 12ಕ್ಕೆ ಸಚಿವ ಸಂಪುಟ ವಿಸ್ತರಣೆ; ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 12 ರಂದು ಆಗಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ...
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Updated on: 
ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 12 ರಂದು ಆಗಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ. 
ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಡೆಯಬೇಕಿದ್ದ ಸಚಿವ ಸಂಪುಟ ವಿಸ್ತರಣೆ ಸಾಕಷ್ಟು ಕಾರಣಾಂತರಗಳಿಂದ ಮುಂದೂಡಿತ್ತು. ಇದೀಗ ಸಂಪುಟ ವಿಸ್ತರಣೆಗೆ ಸಿಎಂ ಕುಮಾರಸ್ವಾಮಿಯವರು ದಿನಾಂಕ ನಿಗದಿ ಮಾಡಿದ್ದು, ಅಕ್ಟೋಬರ್ 12 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ. 
ಆಪರೇಷನ್ ಕಮಲಕ್ಕೆ ಒಳಗಾಗುವ ಭೀತಿ ಹುಟ್ಟಿಸಿದವರು, ಸರ್ಕಾರದಲ್ಲಿ ಕೆಲಸ ನಡೆಯುತ್ತಿಲ್ಲ ಎಂದು ಕೂಗಿದ್ದವರು ಹಾಗೂ ಲೋಕಸಭೆ ಚುನಾವಣೆ ವೇಳೆ ಪಕ್ಷಕ್ಕಾಗಿ ಉತ್ತಮ ಕೊಡುಗೆ ನೀಡುವ ಸಾಧ್ಯತೆ ಹೊಂದಿರುವ ಒಟ್ಟು 26 ಮಂದಿ ಕಾಂಗ್ರೆಸ್ ಶಾಸಕರಿಗೆ ಅಧಿಕಾರ ದೊರೆಯುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಸಚಿವ ಸ್ಥಾನದ ಮೇಲೆ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಕಣ್ಣಿಟ್ಟಿದ್ದಾರೆ. ಆದರೆ, ಪಕ್ಷದ ವರಿಷ್ಟರು ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೆಚ್ಚಿನ ಒತ್ತಾಸೆ ಹೊಂದಿಲ್ಲ. ಅವರನ್ನು ಸಭಾಪತಿಯಾಗಿಯೇ ಮುಂದುವರೆಸುವ ಅಲೋಚನೆಯಲ್ಲಿದ್ದಾರೆ. 
ಇನ್ನು ರಾಜ್ಯಸಭೆ ಸ್ಥಾನದಿಂದ ವಂಚಿತರಾಗಿ ಮೇಲ್ಮನೆಗೆ ಮೊದಲ ಬಾರಿಗೆ ಪ್ರವೇಶಿಸಿರುವ ಬಿ.ಎಂ.ಫಾರೂಕ್ ಹೆಸರು ಮುಂಚೂಣಿಯಲ್ಲಿದೆ. ಫಾರೂಕ್ ಅವರಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್ ಹೈಕಮಾಂಡ್ ಒಲವು ತೋರಿದೆ. ಪಕ್ಷಕ್ಕೆ ಆರ್ಥಿಕ ಸಂಪನ್ಮೂಲವಾಗಿರುವ ಫಾರೂಕ್'ಗೆ ಸಚಿವ ಸ್ಥಾನ ನೀಡಿದರೆ, ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ ಎಂಬುದು ಪಕ್ಷದ ವರಿಷ್ಟರ ಲೆಕ್ಕಾಚಾರವಾಗಿದೆ ಎಂದು ಮೂಲಗಳು ತಿಳಿಸಿವೆ. 
ಎಂಎಲ್'ಸಿ ಗಳನ್ನು ಸಂಪುಟಕ್ಕೆ ಪರಿಗಣಿಸಬೇಕೆಂದು ಮನವಿ ಮಾಡಿಕೊಂಡಿದ್ದೇವೆ. ಆದರೆ, ಪಕ್ಷ ನಾಯಕತ್ವ ಯಾವುದೇ ರೀತಿಯ ನಿರ್ಧಾರ ತೆಗೆದುಕೊಂಡರೂ ಅದನ್ನು ಪರಿಗಣಿಸುತ್ತೇವೆಂದು ಜೆಡಿಎಸ್ ಎಂಎಲ್'ಸಿ ಶರವಣ ಅವರು ಹೇಳಿದ್ದಾರೆ.
ಸಚಿನ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲು ನಿನ್ನೆಯಷ್ಟೇ ಕುಮಾರಸ್ವಾಮಿಯವರು ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಎಂಎಲ್'ಸಿಗಳೊಂದಿಗೆ ಸಾಧಕ ಹಾಗೂ ಬಾಧಕಗಳ ಕುರಿತಂತೆ ಚರ್ಚೆ ನಡೆಸಿದ್ದೇವೆ. ಹೊಸ ಕಚೇರಿಯ ಪದಾಧಿಕಾರಿಗಳ ಆಯ್ಕೆ ಕುರಿತಂತೆ ಪಕ್ಷದ ಮುಖ್ಯಸ್ಥ ವಿಶ್ವನಾಥ್ ಅವರಿಗೆ ಮುಕ್ತ ಹಸ್ತ ನೀಡಿದ್ದೇವೆಂದು ಕುಮಾರಸ್ವಾಮಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com