ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೂವರು ಉತ್ತಮ ಅಧಿಕಾರಿಗಳನ್ನು ನೇಮಿಸಿದ್ದೇನೆ. ಯಾವ ಮಾಫಿಯಾವು ನನಗೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ಎಲ್ಲಾ ರೀತಿಯ ಮಾಫಿಯಾ, ಮಾದಕ ವ್ಯಸನಗಳನ್ನು ಹತ್ತಿಕ್ಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಭೂಗಳ್ಳರು, ಮಾಫಿಯಾ, ದಂಧೆಕೋರರು ತಮ್ಮನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಸಮಸ್ಯೆ ಬಂದರೂ ಅದನ್ನು ಅರಗಿಸಿಕೊಳ್ಳುವ ಶಕ್ತಿ ನನಗಿದೆ ಎಂದಿದ್ದಾರೆ.