ಮುಂದಿನ ವಾರದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ: ಐಎಂಡಿ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಗಳಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರು ಸೇರಿದಂತೆ  ದಕ್ಷಿಣ ಒಳನಾಡು ಮತ್ತು ಕರಾವಳಿಗಳಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ, ಲಕ್ಷ್ಯದ್ವೀವ ಮತ್ತು ಅರೇಬಿಯನ್ ಸಮುದ್ರದಲ್ಲಿ ಕಡಿಮೆ ತೀವ್ರತೆ ಉಂಟಾಗಿರುವ ಕಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 5 ರ ನಂತರ  ಭಾರೀ ಮಳೆಯಾಗುವ ಸಾಧ್ಯತೆಯಿದ್ದು,  ಕೇರಳ ಮತ್ತು ಕರ್ನಾಟಕದಲ್ಲಿ ಸೈಕ್ಲೋನ್ ಉಂಟಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಐಎಂಡಿ ನಿರ್ದೇಶಕ ಸಿ,ಎಸ್ ಪಾಟೀಲ್ ತಿಳಿಸಿದ್ದಾರೆ. 
ಕರಾವಳಿ ಭಾಗದಲ್ಲಿ  ಉತ್ತಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಾಗೂ ಕರಾವಳಿ ಹೆಚ್ಚಿನ ಮಳೆಯಾಗಲಿದ್ದು ಉತ್ತರ ಒಳನಾಡಿನಲ್ಲಿ  ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. 
ಬೆಂಗಳೂರು ನಗರ, ಕೋಲಾರ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಸಂಜೆಯಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, 
ಈಶಾನ್ಯ ಮಾನ್ಸೂನ್ ಮಳೆಯು ಅಕ್ಟೊಬರ್ 2ನೇ ವಾರದಲ್ಲಿ ಕರ್ನಾಟಕ ಪ್ರವೇಶಸಲಿದೆ, ನೈರುತ್ಯ ಮಾನ್ಸೂನ್ ಮಾರುತಗಳು ಈಗಾಗಲೇ ರಾಜ್ಯದಿಂದ ತೆರಳಿವೆ, 
ಸೆಪ್ಟಂಬರ್ ತಿಂಗಳ ಅಂತ್ಯದಲ್ಲಿ ರಾಜ್ಯದ  30 ಜಿಲ್ಲೆಗಳಲ್ಲಿ  ವಿಶೇಷವಾಗಿ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ, 30 ಜಿಲ್ಲೆಗಳಲ್ಲಿ  ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರಿನಲ್ಲಿ ಅಧಿಕ ಮಳೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com