ಸಾಂದರ್ಭಿಕ ಚಿತ್ರ
ರಾಜ್ಯ
ಒತ್ತಡಕ್ಕೆ ಮಣಿದ ರಾಣಿ ಚನ್ನಮ್ಮ ವಿವಿ ಉಪ ಕುಲಪತಿ: ಅಪರಿಚಿತರ ವಿರುದ್ಧ ದೂರು ದಾಖಲು!
ತಮ್ಮ ಮೇಲೆ ಹಲ್ಲೆ ಹಾಗೂ ಕ್ಯಾಂಪಸ್ ನಲ್ಲಿ ನಡೆಸಿದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ರಾಣಿ ಚನ್ನಮ್ಮ ವಿವಿ ಉಪಕುಲಪತಿ ಶಿವಾನಂದ ...
ಬೆಳಗಾವಿ: ತಮ್ಮ ಮೇಲೆ ಹಲ್ಲೆ ಹಾಗೂ ಕ್ಯಾಂಪಸ್ ನಲ್ಲಿ ನಡೆಸಿದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ರಾಣಿ ಚನ್ನಮ್ಮ ವಿವಿ ಉಪಕುಲಪತಿ ಶಿವಾನಂದ ಹೊಸಮನಿ ಕೊನೆಗೂ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಪರಿಚಿತ ಗುಂಪೊಂದು ರಾಣಿ ಚನ್ನಮ್ಮ ವಿವಿಯಲ್ಲಿ ಅಕ್ಟೋಬರ್ 1 ರಂದು ಗಲಾಟೆ ನಡೆಸಿ ದಾಂಧಲೆ ನಡೆಸಿದರು ಎಂದು ವಿವಿ ಶಿವಾನಂದ ಹೊಸಮನಿ ಮತ್ತಿ ವಿವಿ ರಿಜಿಸ್ಚ್ರಾರ್ ಸಿದ್ದು ಅಲಗೂರ್ ದೂರು ದಾಖಲಿಸಿದ್ದಾರೆ, ಆದರೆ ಯಾರು ಎಂಬ ಬಗ್ಗೆ ಮಾತ್ರ ಉಲ್ಲೇಖಿಸಿಲ್ಲ, ಆದರೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಂದು ಆರೋಪ ಕೇಳಿ ಬರುತ್ತಿದೆ.
ಆರ್ ಸಿಯು ಪ್ರಾಧಿಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ, ಈ ಸಂಬಂಧ ಸಿಸಿಟಿವಿ ಫೂಟೇಜ್ ಆಧರಿಸಿ ಕ್ರಮಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ,
ಉಪಕುಲಪತಿ ಅವರ ಮೇಲೆ ನಡೆದ ಹಲ್ಲೆ ಹಾಗೂ ದಾಂಧಲೆಗೆ ಯಮನಕರಡಿ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ಕಾರಣ ಎಂದು ಹೇಳಲಾಗಿದೆ. ಕ್ಯಾಂಪಸ್ ನಲ್ಲಿ ನಡೆದ ಕೆಲವು ಕಾರ್ಯಕ್ರಮ ಹಾಗೂ ಹೆದ್ದಾರಿ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರನ್ನು ಆಹ್ವಾನಿಸಿಲ್ಲ ಎಂಬ ಕಾರಣಕ್ಕೆ ಈ ದಾಂಧಲೆ ನಡೆಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ