ಬೆಂಗಳೂರು: ನಗರದಲ್ಲಿ ಇನ್ನೂ 4-5 ದಿನ ಮಳೆ ಸಾಧ್ಯತೆ

ಬೆಂಗಳೂರು ನಗರದ ವಿವಿಧೆಡೆ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಇನ್ನು 4-5 ದಿನ ಕಾಲ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್'ಡಿಎಂಸಿ) ತಿಳಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಬೆಂಗಳೂರು ನಗರದ ವಿವಿಧೆಡೆ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಇನ್ನು 4-5 ದಿನ ಕಾಲ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್'ಡಿಎಂಸಿ) ತಿಳಿಸಿದೆ.
ಬಂಗಾಳಕೊಲ್ಲಿಯ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿದ ಉಂಟಾಗಿದ್ದು, ಸೋಮವಾರ ಭೂಭಾಗದಮೇಲೆ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ನಗರದಲ್ಲಿ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಉಳಿದಂತೆ ನಗರದಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾದ ವರದಿಯಾಗಿವೆ. 
ಹಲವೆಡೆ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುಂತಾಗಿತ್ತು. ವಿವಿಧ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com