ಸಾಂದರ್ಭಿಕ ಚಿತ್ರ
ರಾಜ್ಯ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಸುಧಾ ಮೂರ್ತಿ ಚಾಲನೆ
ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಗ್ಗೆ 7. 05 ರಿಂದ 7.35 ರೊಳಗೆ ಸಲ್ಲುವ ತುಲಾ ಲಗ್ನದಲ್ಲಿ ಲೇಖಕಿ ಹಾಗೂ ಇನ್ಪೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ.
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಗ್ಗೆ 7. 05 ರಿಂದ 7.35 ರೊಳಗೆ ಸಲ್ಲುವ ತುಲಾ ಲಗ್ನದಲ್ಲಿ ಲೇಖಕಿ ಹಾಗೂ ಇನ್ಪೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ವಿಶ್ವ ವಿಖ್ಯಾತ ಮೈಸೂರು ದಸರಾ-2018 ಮಹೋತ್ಸವ ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮತ್ತಿತರ ಗಣ್ಯರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದೇ ತಿಂಗಳ 19 ರಂದು ಮಧ್ಯಾಹ್ನ 2-30 ರಿಂದ 3-16 ರೊಳಗೆ ಸಲ್ಲುವ ಕುಂಬ ಲಗ್ನದಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ , ಅರಮನೆಯ ಉತ್ತರ ದ್ವಾರದಲ್ಲಿ ನಂದಿ ದ್ವಜದ ಪೂಜೆ ಸಲ್ಲಿಸಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ನಂತರ ಅರ್ಜುನ ಹೊತ್ತು ತರಲಿರುವ 750 ಕೆಜಿ ತೂಕದ ಬಂಗಾರದ ಅಂಬಾರಿಯಲ್ಲಿ ಬರುವ ನಾಡ ದೇವತೆ ಚಾಮುಂಡೇಶ್ವರಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮಧ್ಯಾಹ್ನ 3-40 ರಿಂದ 4-10ರ ನಡುವೆ ಪುಷ್ಪಾರ್ಚನೆ ಮಾಡಲಿದ್ದಾರೆ.
7ನೇ ಬಾರಿ ಅರ್ಜುನ ಅಂಬಾರಿ ಹೊರಲಿದ್ದಾನೆ. ಈತನ ಜತೆ ಅಭಿಮನ್ಯು, ಬಲರಾಮ, ವಿಕ್ರಮ, ವಿಜಯ, ಕಾವೇರಿ, ಗಜೇಂದ್ರ, ಗೋಪಾಲಕೃಷ್ಣ, ದುರ್ಗಾಪರಮೇಶ್ವರಿ, ಗೋಪಿ, ಪ್ರಕಾಶ್ ಹೆಜ್ಜೆ ಹಾಕಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ