ಮಡಿಕೇರಿಯಲ್ಲಿ ಕಾವೇರಿ ತೀರ್ಥೋದ್ಭವ: ತುಲಾ ಸಂಕ್ರಮಣ ಜಾತ್ರೆಗೆ 50 ಲಕ್ಷ ಘೋಷಣೆ

ಇದೇ 17 ರಂದು ಕನ್ನಡ ನಾಡಿನ ಜೀವನದಿ ಕಾವೇರಿ ತೀರ್ಥ ರೂಪಿಣಿಯಾಗಿ ದರ್ಶನ ನೀಡಲಿದ್ದು, ತಲಾ ಕಾವೇರಿಯಲ್ಲಿ ನಡೆಯಲಿರುವ ತುಲಾ ಸಂಕ್ರಮಣ ಜಾತ್ರೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಅಧ್ಯಕ್ಷತೆಯಲ್ಲಿ ಭಾಗಮಂಡಲದಲ್ಲಿ ನಿನ್ನೆ ಸಭೆ ನಡೆಸಲಾಯಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಡಿಕೇರಿ: ಇದೇ 17 ರಂದು  ಕನ್ನಡ ನಾಡಿನ ಜೀವನದಿ ಕಾವೇರಿ ತೀರ್ಥ ರೂಪಿಣಿಯಾಗಿ ದರ್ಶನ ನೀಡಲಿದ್ದು,   ತಲಾ ಕಾವೇರಿಯಲ್ಲಿ ನಡೆಯಲಿರುವ  ತುಲಾ ಸಂಕ್ರಮಣ ಜಾತ್ರೆ ಹಿನ್ನೆಲೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಅಧ್ಯಕ್ಷತೆಯಲ್ಲಿ ಭಾಗಮಂಡಲದಲ್ಲಿ ನಿನ್ನೆ ಸಭೆ ನಡೆಸಲಾಯಿತು.

ತುಲಾ ಸಂಕ್ರಮಣದ ಹಿನ್ನೆಲೆಯಲ್ಲಿ ಮಾಡಬೇಕಾದ ಅಗತ್ಯ ಸಿದ್ದತೆ ಕುರಿತಂತೆ ಚರ್ಚಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ಕೆ. ಜಿ. ಬೋಪಯ್ಯ, ತುಲಾ ಸಂಕ್ರಮಣಕ್ಕಾಗಿ ಸರ್ಕಾರ 50 ಲಕ್ಷ  ಬಿಡುಗಡೆ ಮಾಡುವುದಾಗಿ ತಿಳಿಸಿದರು.

ತಲಾ ಕಾವೇರಿ ಹಾಗೂ ಭಾಗಮಂಡಲ ದೇವಾಲಯ ಸಮಿತಿ ಸದಸ್ಯರು, ಭಾಗಮಂಡಲ ಗ್ರಾಮಸ್ಥರು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸೂರ್ಯನು ತುಲಾ ರಾಶಿಯನ್ನು ಪ್ರವೇಶಿಸುವ ದಿನದಂದು, ಅಂದರೆ ಸಾಮಾನ್ಯವಾಗಿ ಅಕ್ಟೋಬರ್ ೧೭ರಂದು, ಒಂದು ನಿಯತ ಕಾಲದಲ್ಲಿ ತೀರ್ಥೋದ್ಭವವುಂಟಾಗುತ್ತದೆ. ತಲಕಾವೇರಿಯಲ್ಲಿರುವ ಒಂದು ಸಣ್ಣ ಕುಂಡಿಕೆಯಲ್ಲಿ ನೀರು ಭೂಮಿಯೊಳಗಿನಿಂದ ಚಿಲುಮೆಯಂತೆ ಮೇಲೆ ಉಕ್ಕಿ ಹರಿಯುತ್ತದೆ.
ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಹಾಗೂ  ತೀರ್ಥವನ್ನು ಮನೆಗೆ  ತೆಗೆದುಕೊಂಡು ಹೋಗಲು ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಸಾವಿರಾರು ಜನರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ  ಬಿಗಿ ಬಂದೋಬಸ್ತ್ ಕೈಗೊಳ್ಳಬೇಕಾಗುತ್ತದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com