ನಾಡಹಬ್ಬ 'ಮೈಸೂರು ದಸರಾ' ಆರಂಭ; ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬುಧವಾರ ಚಾಲನೆ ನೀಡಿದರು. ಇಂದು ಬೆಳಗ್ಗೆ 7.05ಕ್ಕೆ ತುಲಾ ಲಗ್ನದಲ್ಲಿ ....
ನಾಡಹಬ್ಬ 'ಮೈಸೂರು ದಸರಾ' ಆರಂಭ; ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಚಾಲನೆ

ಮೈಸೂರು: ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬುಧವಾರ ಚಾಲನೆ ನೀಡಿದರು.

ಇಂದು ಬೆಳಗ್ಗೆ 7.05ಕ್ಕೆ ತುಲಾ ಲಗ್ನದಲ್ಲಿ  ಚಾಮುಂಡಿ ದೇವಿಗೆ ಅಗ್ರಪೂಜೆ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಇನ್ಫೋಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಹಾಗೂ ಖ್ಯಾತ ಬರಹಗಾರ್ತಿ ಸುಧಾ ನಾರಾಯಣ ಮೂರ್ತಿ  ನಾಡ ಹಬ್ಬಕ್ಕೆ ಅಧಿಕೃತ ಚಾಲನೆ ನೀಡಿದರು. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡ, ಸಂಸ್ಕೃತಿ ಖಾತೆ ಸಚಿವೆ ಜಯಮಾಲಾ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ ಸಿಂಹ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಸುಧಾಮೂರ್ತಿ ಮತ್ತು ಅವರ ಕುಟುಂಬ ಸದಸ್ಯರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಹತ್ತು ದಿನಗಳ ಕಾಲವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಾಡಿನ ಸಾಂಸ್ಕೃತಿಕ ಸೊಗಡಿಗೆ ಕನ್ನಡಿ ಹಿಡಿಯಲಿವೆ. ದಸರಾ ಸಂಭ್ರಮವನ್ನು ಕಣ್ತುಂಬಿಸಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಜನ ಮೈಸೂರಿಗೆ ಆಗಮಿಸುತ್ತಿದ್ದಾರೆ. ವಿಜಯ ದಶಮಿ ದಿನ ನಡೆಯುವ ಜಂಬೂ ಸವಾರಿ ವಿಶ್ವ ಪ್ರಸಿದ್ಧಿ ಗಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com